ವಿಜಯಪುರ : ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ಸಿಂದಗಿಯ ಕಾಂಗ್ರೆಸ್ನ ಮಾಜಿ ಶಾಸಕ ಶರಣಪ್ಪ ಸುಣಗಾರ ತಮ್ಮ ನಿವಾಸದ ಮೇಲೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ತಳವಾರ ಮತ್ತು ಪರಿವಾರ ಸಮುದಾಯಗಳಿಗೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಧರಣಿ ಕೂಡ ಮಾಡಲಾಗುತ್ತಿದೆ. ಈ ಸಮುದಾಯಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ. ತಕ್ಷಣವೇ ಸಂಬಂಧಿತ ಅಧಿಕಾರಿಗಳು ಎಸ್ಟಿ ಪ್ರಮಾಣಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ ಶರಣಪ್ಪ ಸುಣಗಾರ ಅವರು, ಟಿಪ್ಪು ಸುಲ್ತಾನ್ ಸರ್ಕಲ್ನಲ್ಲಿರುವ ತಮ್ಮ ನಿವಾಸದ ಮೇಲೆ ಕಪ್ಪು ಬಾವುಟ ಹಾಕಿದ್ದಾರೆ.