ETV Bharat / state

ಕಾಂಗ್ರೆಸ್​ನಿಂದ ಬಿಜೆಪಿ ಮುಖಂಡರ ಹೈಜಾಕ್​ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್​ - lati charge

ವಿಜಯಪುರದಲ್ಲಿ ಜಿಲ್ಲಾ ಪಂಚಾಯತ್​ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ಸದಸ್ಯರನ್ನು ಹೈಜಾಕ್​ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
author img

By

Published : Jun 30, 2020, 5:55 PM IST

ವಿಜಯಪುರ: ಜಿಲ್ಲಾ ಪಂಚಾಯತ್​ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿ ಸದಸ್ಯರನ್ನು ಹೈಜಾಕ್​ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನಜಂಗುಳಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್​ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ, ಪೊಲೀಸರಿಂದ ಲಘು ಲಾಠಿ ಚಾರ್ಜ್​

ಜಿಲ್ಲಾ ಪಂಚಾಯತ್​ನ 42 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು 22 ಸ್ಥಾನಗಳ ಅವಶ್ಯಕತೆಯಿದೆ. ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3 ಹಾಗೂ ಪಕ್ಷೇತರ ಒಬ್ಬ ಸದಸ್ಯನಿದ್ದಾನೆ. ಇಂದು ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ನಾಲ್ವರು ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಯಿತು. ಈ ವೇಳೆ ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್ ಮುಖಂಡರು, ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.