ETV Bharat / state

ಚುನಾವಣೆಗೆ ಮುನ್ನ ಕಾಂಗ್ರೆಸ್​​ನಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಇಲ್ಲ: ಗೆದ್ದ ನಮ್ಮ ಶಾಸಕರೇ ನಿರ್ಧರಿಸುತ್ತಾರೆ.. ಬಸವರಾಜ್ ರಾಯರೆಡ್ಡಿ

ವಿಜಯಪುರದಲ್ಲಿ ಕಾಂಗ್ರೆಸ್ ಮುಖಂಡ ಬಸವರಾಜ್ ರಾಯರೆಡ್ಡಿ ಮಾಧ್ಯಮಗೋಷ್ಠಿ - ರಾಜ್ಯದಲ್ಲಿ ಮೇ18 ರೊಳಗೆ ಹೊಸ ಸರ್ಕಾರ ರಚನೆ - ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಪ್ರಚಾರ - ಫೆಬ್ರವರಿ 3 ರಿಂದ ಕಾಂಗ್ರೆಸ್​​​ನ ಎರಡು ತಂಡಗಳಿಂದ ರಾಜ್ಯದಲ್ಲಿ ಪ್ರವಾಸ

Congress leader Basavaraj Rayareddy media conference
ಕಾಂಗ್ರೆಸ್ ಮುಖಂಡ ಬಸವರಾಜ್ ರಾಯರೆಡ್ಡಿ ಮಾಧ್ಯಮಗೋಷ್ಠಿ
author img

By

Published : Jan 25, 2023, 3:55 PM IST

Updated : Jan 25, 2023, 7:32 PM IST

ಬಸವರಾಜ್ ರಾಯರೆಡ್ಡಿ ಹೇಳಿಕೆ

ವಿಜಯಪುರ: ರಾಜ್ಯದ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಮೇ 18ರ ಒಳಗಾಗಿ ಹೊಸ ಸರ್ಕಾರ ರಚನೆಯಾಗಬೇಕು. ಹೀಗಾಗಿ ಕಾಂಗ್ರೆಸ್ ಪಕ್ಷ ಸಹ ಎರಡು ಹಂತದಲ್ಲಿ ಚುನಾವಣೆ ಪ್ರಚಾರ ಕೈಗೊಂಡಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದರು. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೂ ಸಹ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿದೆ. ಬಿಜೆಪಿ ಸರಕಾರದ ಜನ ವಿರೋಧಿ ನೀತಿಗಳನ್ನು ಮತದಾರರಿಗೆ ತಿಳಿಸ‌ಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಪ್ರಚಾರ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಪ್ರಚಾರ: ಖರ್ಗೆ ಸೂಚನೆ ಪ್ರಕಾರ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಪ್ರಚಾರ ಮಾಡಬೇಕು. ಅಂದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಹರಿಪ್ರಸಾದ್ ಅವರು, ಎಮ್ ಬಿ ಪಾಟೀಲ್​ ಅವರ ಮುಂದಾಳತ್ವದಲ್ಲಿ ಚುನಾವಣೆ ಪ್ರಚಾರವನ್ನು ಬೆಳಗಾವಿಯ ವೀರಸೌಧದಿಂದ ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಬೆಳಗಾವಿ ವೀರಸೌಧದಿಂದ ಯಾಕೆ ಚುನಾವಣೆ ಪ್ರಚಾರ ಕೈಗೊಂಡಿದ್ದೇವೆ ಅಂದರೆ ಅದಕ್ಕೊಂದು ಐತಿಹಾಸಿಕವಿದೆ. ಡಿ.26 27 1924ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಥಳವಾಗಿದೆ. ಹೀಗಾಗಿ ವೀರಸೌಧದಿಂದ ಕಾಂಗ್ರೆಸ್ ಈ ಬಾರಿ ಪ್ರಚಾರವನ್ನು ಶುರು ಮಾಡಿದೆ ಎಂದು ತಿಳಿಸಿದರು.

ಕಾಂಗ್ರೆಸ್​​​ನ ಎರಡು ತಂಡಗಳು ರಾಜ್ಯದಲ್ಲಿ ಪ್ರವಾಸ:ಫೆಬ್ರವರಿ 3 ರಿಂದ ಎರಡು ತಂಡಗಳು ರಾಜ್ಯದಲ್ಲಿ ಪ್ರವಾಸ ಮಾಡಲಿವೆ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಸವ ಕಲ್ಯಾಣದಿಂದ ಯಾತ್ರೆ ಆರಂಭವಾಗಲಿದೆ. ಪ್ರಜಾಧ್ವನಿ ಬಸ್ ಯಾತ್ರೆ ಕಾರ್ಯಕ್ರಮಗಳನ್ನು ಇದೇ ವೇಳೆ ಪ್ರಕಟಿಸಿದ ಅವರು, 112 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಫೆಬ್ರವರಿ 11 ರಂದು ಯಾತ್ರೆ ಆಗಮಿಸಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರಜಾಧ್ವನಿ ಬಸ್ ಯಾತ್ರೆ: ಪ್ರಜಾಧ್ವನಿ ಬಸ್ ಯಾತ್ರೆ ಕಾರ್ಯಕ್ರಮವೂ ಜಿಲ್ಲೆಯ ಸಿಂದಗಿ, ಇಂಡಿ, ನಾಗಠಾಣ ಕ್ಷೇತ್ರದಲ್ಲಿ ನಡೆಯಲಿದೆ.12 ನೇ ತಾರೀಖು ಬಬಲೇಶ್ವರ, ದೇವರ ಹಿಪ್ಪರಗಿ, ಬಸವನ ಬಾಗೇವಾಡಿಯಲ್ಲಿ ಯಾತ್ರೆ ಜರುಗಲಿದೆ.ಮುದ್ದೇಬಿಹಾಳ ಮತ ಕ್ಷೇತ್ರದಲ್ಲಿ ಫೆಬ್ರವರಿ 21ನೇ ತಾರೀಖು ಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

ಸಿಎಂ ಘೋಷಣೆ ಸದ್ಯ ಇಲ್ಲ:ನಮ್ಮ ಪಕ್ಷದಲ್ಲಿ ಅಂತರಿಕ ಪ್ರಜಾಪ್ರಭುತ್ವ ಇದೆ. ಶಾಸಕಾಂಗ ಪಕ್ಷದ ನಾಯಕನಾದ ಬಳಿಕ ಯಾರು ಸಿಎಂ ಎಂದು ನಿರ್ಧಾರ ಮಾಡಲಾಗುತ್ತದೆ. ಸಿಎಂ ಯಾರು ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಚುನಾವಣೆಗೂ ಮುನ್ನ ಸಿಎಂ ಘೋಷಣೆ ನಮ್ಮಲ್ಲಿ ಇಲ್ಲ.‌ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಯಾರು ಬೇಕಾದರೂ ಹೇಳಬಹುದು, ಆದರೆ, ಪಕ್ಷ ಅದನ್ನು ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದಕ್ಕೆ ಪ್ರತಿಯೊಬ್ಬರು ಬದ್ಧರಾಗಿರಬೇಕು ಎಂದು ಅಭಿಪ್ರಾಯ ತಿಳಿಸಿದರು.

ಪಕ್ಷಾಂತರಿಗಳು ನಮ್ಮವರೇ: ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಪಕ್ಷಾಂತರಿಗಳು ನಮ್ಮವರೇ. ಪಕ್ಷಾಂತರಿಗಳಿಗೆ ಬಿಜೆಪಿ ಆಮಿಷ ಒಡ್ಡಿದ ಕಾರಣ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಪಕ್ಷಕ್ಕೆ ಹಾರಿ ಈಗ ಅಧಿಕಾರ ಅನುಭವಿಸುತ್ತಿದ್ದಾರೆ. ಅವರು ಮತ್ತೊಮ್ಮೆ ಕಾಂಗ್ರೆಸ್ ಗೆ ಬರುವ ವಿಚಾರವಾಗಿ ತಮ್ಮದು ವೈಯಕ್ತಿಕ ವಿಚಾರ ಅವರನ್ನು ವಾಪಸ್ ಸೇರಿಸಿಕೊಳ್ಳಬಾರದು ಎನ್ನುವುದು ಇದೆ ಎಂದು ರಾಯರೆಡ್ಡಿ ಸ್ಪಷ್ಟಪಡಿಸಿದರು.

ಇದನ್ನೂಓದಿ:ಸಿಎಂ ಭ್ರಷ್ಟಾಚಾರದ ಪಿತಾಮಹ.. ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ಪೊಲೀಸರಿಗೆ ದೂರು

Last Updated : Jan 25, 2023, 7:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.