ವಿಜಯಪುರ: ದೆಹಲಿಯ ಜೆಎನ್‌ಯು ಕ್ಯಾಂಪಸ್ನಲ್ಲಿ ನಡೆದ ಹಿಂಸಾಚಾರ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಯುವ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು, ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಜೆಎನ್‌ಯುನಲ್ಲಿ ಎಬಿವಿಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿ, ಅಮಾಯಕ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದರು.
ಅಲ್ಲಿನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದು ಸರಿಯಲ್ಲ. ಇದಕ್ಕೆಲ್ಲಾ ಬಿಜೆಪಿ ಪರೋಕ್ಷವಾಗಿ ಕಾರಣವಾಗಿದೆ ಎಂದು ಆರೋಪಿಸಿದರು.
ಇನ್ನು, ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಕಾರಣವಾದ ವ್ಯಕ್ತಿಗಳನ್ನು ಶೀಘ್ರವೇ ಬಂಧಿಸುವಂತೆ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.