ವಿಜಯಪುರ: ಭಾನುವಾರ ನಡೆದ ಸಿಂದಗಿ ಪುರಸಭೆ ಚುನಾವಣೆಗೆ ಇಂದು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಪುರಸಭೆಯ ಒಟ್ಟು 23 ಸ್ಥಾನಗಳಿಗೆ ಭಾನುವಾರ ಮತದಾನ ನಡೆದಿತ್ತು. ಇಂದು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ 11 ಸ್ಥಾನಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಹಾಗೂ ಜೆಡಿಎಸ್ ತಲಾ 3 ಸ್ಥಾನ ಗಳಿಸಿ ಹೀನಾಯ ಸೋಲು ಅನುಭವಿಸಿದ್ದು, ಪಕ್ಷೇತರರು 3 ಸ್ಥಾನಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಟ್ಟು 23 ಸ್ಥಾನಕ್ಕೆ ಕಾಂಗ್ರೆಸ್ 19 ವಾರ್ಡ್ಗಳಲ್ಲಿ, ಬಿಜೆಪಿ 20 ವಾರ್ಡ್ಗಳಲ್ಲಿ, ಜೆಡಿಎಸ್ 23 ವಾರ್ಡ್ಗಳಲ್ಲಿ, ಬಿಎಸ್ಪಿ 6 ವಾರ್ಡ್ಗಳಲ್ಲಿ, ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಇದೀಗ ಬಂದ ಫಲಿತಾಂಶದಲ್ಲಿ ಕಾಂಗ್ರೆಸ್ 11, ಬಿಜೆಪಿ 3, ಜೆಡಿಎಸ್ 3 , ಇತರರು 3 ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದಾರೆ. ಇದೀಗ ಕಾಂಗ್ರೆಸ್ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.