ವಿಜಯಪುರ: ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಗುತ್ತಿಗೆದಾರನೊಬ್ಬ ತನ್ನ ಸ್ನೇಹಿತರಿಗೆ ನಿನ್ನೆ ತಡರಾತ್ರಿ ಗುಂಡು - ತುಂಡಿನ ಪಾರ್ಟಿ ಮಾಡಿ ಸರ್ಕಾರಿ ಬಂಗಲೆಯನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ.
ಗುತ್ತಿಗೆದಾರನೊಬ್ಬ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡದಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ತನ್ನ ಸ್ನೇಹಿತರಿಗೆ ಹಾಗೂ ಸಹದ್ಯೋಗಿಗಳಗೆ ಗುಂಡು-ತುಂಡಿನ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಸುಮಾರು 200ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು ಎನ್ನಲಾಗುತ್ತಿದೆ. ಈ ಕುರಿತಾದ ವಿಡಿಯೋ-ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಓದಿ: ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ಪ್ರಧಾನ ಮಂತ್ರಿ ಪ್ರಶಂಸನೀಯ ಸೇವಾ ಪದಕ
ಇನ್ನು ಕಂಟ್ರಾಕ್ಟರ್ ಸರ್ಕಾರಿ ಬಂಗಲೆಯನ್ನು ತಮ್ಮ ಖಾಸಗಿ ಕಾರ್ಯಕ್ರಮಕ್ಕೆ ಬಳಸಿಕೊಂಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ವಿಷಯ ತಿಳಿದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದೇ ಜಾಣ ಕುರುಡತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.