ವಿಜಯಪುರ : ಜಿಲ್ಲೆಯಲ್ಲಿ ಇಂದು 80 ಹೊಸದಾಗಿ ಪಾಸಿಟಿವ್ ಪ್ರಕರಣ ದೃಢವಾಗಿವೆ. ಈವರೆಗೆ 11,761 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 89 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 11,086 ಕ್ಕೆ ಏರಿಕೆಯಾಗಿದೆ.
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 187 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 488 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಈವರೆಗೆ 1,29,725 ಜನರ ಮೇಲೆ ನಿಗಾ ಇಡಲಾಗಿದೆ. 1,28,963 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,14,222 ಜನರ ವರದಿ ನೆಗಟಿವ್ ಆಗಿದೆ. 11,761 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 2,987 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
ಕಲಬುರಗಿ : ಜಿಲ್ಲೆಯಲ್ಲಿ ಹೊಸದಾಗಿ 67 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 216 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 19,148 ಹಾಗೂ ಗುಣಮುಖರಾದವರ ಸಂಖ್ಯೆ 18,137ಕ್ಕೆ ಏರಿಕೆಯಾಗಿದೆ. ಇಂದು ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಮೃತರ ಸಂಖ್ಯೆ 301 ಇದೆ. 710 ಆ್ಯಕ್ಟೀವ್ ಪ್ರಕರಣಗಳಿದ್ದು, ಆರೈಕೆಯಲ್ಲಿದ್ದಾರೆ.
ಬಾಗಲಕೋಟೆ : ಜಿಲ್ಲೆಯಲ್ಲಿ 37 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 27 ಕೊರೊನಾ ಪ್ರಕರಣ ಹಾಗೂ ಒಂದು ಮೃತ ಪ್ರಕರಣ ಮಂಗಳವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 12,644 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 11,572 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 2, ಬಾದಾಮಿ 6, ಹುನಗುಂದ 6, ಮುಧೋಳ 6, ಜಮಖಂಡಿ 7 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 13,67 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,39,978 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,25,456 ನೆಗಟಿವ್ ಪ್ರಕರಣ ಹಾಗೂ 128 ಮೃತ ಪ್ರಕರಣ ವರದಿಯಾಗಿರುತ್ತದೆ. 944 ಮಾತ್ರ ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 438 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ : ಜಿಲ್ಲೆಯಲ್ಲಿ ಇಂದು 79 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,024ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 23, ಕೊಪ್ಪಳ ತಾಲೂಕಿನಲ್ಲಿ 29, ಕುಷ್ಟಗಿ ತಾಲೂಕಿನಲ್ಲಿ 16 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 11 ಪ್ರಕರಣ ಸೇರಿ ಇಂದು ಒಟ್ಟು 79 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 272 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 61 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,094 ಜನರು ಗುಣಮುಖರಾಗಿದ್ದಾರೆ. 553 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.