ವಿಜಯಪುರ : ಜಿಲ್ಲೆಯಲ್ಲಿಂದು 22 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. 14 ಸೋಂಕಿತರು ಹೋಂ ಐಸೋಲೇಷಲ್ನಲ್ಲಿದ್ದಾರೆ. ಇಂದು ಆಸ್ಪತ್ರೆಯಿಂದ ಒಬ್ಬರು ಬಿಡುಗಡೆಯಾಗಿದ್ದಾರೆ. ಇಂದು 2,613 ಜನರಿಗೆ ಟೆಸ್ಟ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸಹಾಯವಾಣಿ ಆರಂಭ : ಕೋವಿಡ್ ಹಾಗೂ ಒಮಿಕ್ರಾನ್ ವೈರಸ್ ಹಿನ್ನೆಲೆ ರಾಜ್ಯಾದ್ಯಂತ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಸಾರ್ವಜನಿಕರು ವೈದ್ಯಕೀಯ ಹಾಗೂ ಆಕ್ಸಿಜನ್ ಪೂರೈಕೆ ಹಾಗೂ ಕೋವಿಡ್ ಇತರೆ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ಕುಮಾರ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 1077, 08352- 222101, 222102, 22161, ಬಸವನಬಾಗೇವಾಡಿ ತಾಲೂಕು ಆಸ್ಪತ್ರೆ ಸಂಖ್ಯೆ- 82775044283 ಆಗಿದೆ. ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ಸಂಖ್ಯೆ-8277504283, ಇಂಡಿ ತಾಲೂಕಾಸ್ಪತ್ರೆ ಸಂಖ್ಯೆ-8277504365 ಹಾಗೂ ಸಿಂದಗಿ ತಾಲೂಕು ಆಸ್ಪತ್ರೆ - 8488222014 ಸಂಖ್ಯೆಗೆ ಅಗತ್ಯವಿದ್ದವರು ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ದಂಡ ವಸೂಲಿಗೆ ಸೂಚನೆ : ಜಿಲ್ಲೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಸರಿಯಾಗಿ ಧರಿಸದ್ದಿದ್ದಲ್ಲಿ ಮಹಾನಗರ ಪಾಲಿಕೆ ಪ್ರದೇಶದಲ್ಲಿ 250 ರೂ. ಹಾಗೂ ಇತರೆಡೆ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಎಸ್ವೈ ಮೂಗಿಗೆ ತುಪ್ಪ ಸವರಿ, ಕಿವಿ ಮೇಲೆ ಹೂ ಇಟ್ಟು ಮನೇಲಿ ಕೂತಿದ್ದಾರೆ: ವಾಲ್ಮೀಕಿ ಶ್ರೀ ಗುಡುಗು