ETV Bharat / state

10 ವಿದ್ಯಾರ್ಥಿಗಳು ಮತ್ತು 23 ಶಿಕ್ಷಕರಲ್ಲಿ ಕೊರೊನಾ ಪತ್ತೆ: ಜಿಲ್ಲಾಧಿಕಾರಿ ಪಿ.ಸುನೀಲಕುಮಾರ... - ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 3,541 ವಿದ್ಯಾರ್ಥಿಗಳು ಕೊರೊನಾ ಟೆಸ್ಟ್​ಗೆ ಒಳಗಾಗಿದ್ದು, ಅವರಲ್ಲಿ 10 ವಿದ್ಯಾರ್ಥಿಗಳಿಗೆ ಹಾಗೂ 373 ಶಿಕ್ಷಕರಲ್ಲಿ 23 ಜನರಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

District Collector P.Sunilakumara
ಜಿಲ್ಲಾಧಿಕಾರಿ ಪಿ.ಸುನೀಲಕುಮಾರ
author img

By

Published : Nov 22, 2020, 7:52 PM IST

ವಿಜಯಪುರ: ಜಿಲ್ಲೆಯಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಐದು ದಿನ ಕಳೆದಿದ್ದು ಇಲ್ಲಿಯವರೆಗೆ 3,541 ವಿದ್ಯಾರ್ಥಿಗಳು ಕೊರೊನಾ ಟೆಸ್ಟ್​ಗೆ ಒಳಗಾಗಿದ್ದಾರೆ. ಅವರಲ್ಲಿ 10 ವಿದ್ಯಾರ್ಥಿಗಳಿಗೆ ಹಾಗೂ 373 ಶಿಕ್ಷಕರಲ್ಲಿ 23 ಜನರಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಪಾಸಿಟಿವ್ ಬಂದ 10 ವಿದ್ಯಾರ್ಥಿಗಳನ್ನು ಹಾಗೂ 23 ಶಿಕ್ಷಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಜೊತೆ ಸಂಪರ್ಕ ಇರುವ ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ಸಹ ಕಡ್ಡಾಯವಾಗಿ ಹೋಮ್ ಕ್ವಾರೈಂಟೆನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತಿ ಕಾಲೇಜುಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದರ ಜೊತೆ ಪ್ರತಿ ದಿನ‌ ಕಾಲೇಜು ಆರಂಭವಾಗುವ ಮುನ್ನ ಕೋಣೆಗಳಲ್ಲಿ ಸ್ಯಾನಿಟೈಸರ್​ ಮೂಲಕ ಶುಚಿಗೊಳಿಸಿ ನಂತರ ಕ್ಲಾಸ್ ಆರಂಭಿಸಬೇಕು ಎಂದು ಕಾಲೇಜು ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಕರಲ್ಲಿ ಜ್ವರ, ಕೆಮ್ಮು ಇದ್ದರೆ ಅವರಿಗೆ ಕಾಲೇಜಿಗೆ ಬರಬಾರದು. ಅಂತಹ ಶಿಕ್ಷಕರು ವಿದ್ಯಾರ್ಥಿಗಳು ಕಡ್ಡಾಯವಾಗಿ ಸ್ವ್ಯಾಬ್ ಟೆಸ್ಟ್​ಗೆ ಒಳಗಾಗಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾದ ನಂತರ ಕಾಲೇಜ್​ಗೆ ಬರಬೇಕೆಂದು ಡಿಸಿ ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.