ವಿಜಯಪುರ: ಮಹಾಮಾರಿ ಕೊರೊನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಸರ್ಕಾರ ವ್ಯಾಪಾರ, ವಾಹಿವಾಟು, ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಿದ್ದು, ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣ ಜನರಿಲ್ಲದೆ ಸ್ತಬ್ಧವಾಗಿದೆ.
ಕಳೆದೆರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಲಬುರಗಿ ಹಾಗೂ ಮಹಾರಾಷ್ಟ್ರ, ಬೆಂಗಳೂರಿನಿಂದ ಬರುವ ಬಸ್ ಸಂಚಾರಕ್ಕೆ ಕಡಿವಾಣ ಹಾಕಿದ್ದರು. ಆದ ಕಾರಣ ನಿನ್ನೆಯಿಂದಲೂ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರವಿಲ್ಲದೆ ದೂರದ ಊರುಗಳಿಗೆ ತೆರಳಲು ಜನರು ಪರದಾಡುತ್ತಿದ್ದಾರೆ.
ಇಂದು ಕೂಡ ಯಾವುದೇ ಬಸ್ಗಳು ರಸ್ತೆಗಿಳಿದಿಲ್ಲ. ಪರಿಣಾಮ ಸಾರ್ವಜನಿಕರು ಪರದಾಡುತ್ತಿದ್ದಾರೆ. ಬಸ್ ನಿಲ್ದಾಣದ ವಾಣಿಜ್ಯ ಮಳಿಗೆಗಳು ಸಂಪೂರ್ಣವಾಗಿ ಬಂದ್ ಆಗಿವೆ. ನಾಳೆಯಿಂದ ಜಿಲ್ಲೆಯ ಒಳಗೆ ಮಾತ್ರ ಬಸ್ ಸಂಚಾರ ಆರಂಭವಾಗಲಿದೆ ಎನ್ನಲಾಗುತ್ತಿದೆ.