ವಿಜಯಪುರ : ಕೊರೊನಾ ತಡೆಗೆ ನಿತ್ಯ ಒಂದಿಲ್ಲೊಂದು ಸಭೆ ನಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿಗೂ ಸದ್ಯ ಕೊರೊನಾ ವಕ್ಕರಿಸಿದೆ.
ಜಿಲ್ಲಾಧಿಕಾರಿ ಕಚೇರಿಯ ಓರ್ವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಸ್ಪಷ್ಟಪಡಿಸಿದ್ದಾರೆ. P-94569 (38 ವರ್ಷದ ಪುರುಷ) ಸೋಂಕು ತಗುಲಿರುವ ವ್ಯಕ್ತಿ.
ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ವ್ಯಾಪ್ತಿಯಲ್ಲಿ ಔಷಧಿ ಸಿಂಪಡಣೆ ಮಾಡಲಾಗಿದೆ ಮತ್ತು ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ. ಸೋಮವಾರದಿಂದ ಎಂದಿನಂತೆ ಕಚೇರಿ ಕಾರ್ಯ ನಿರ್ವಹಿಸಲಿದೆ.