ವಿಜಯಪುರ : ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ಕಾರಣ ಗ್ರಾಮೀಣ ಭಾಗದ ಜನ ತುಸು ನಿರಾತಂಕವಾಗಿದ್ದರು. ಆದರೆ, ಇದೀಗ ಕೊರೊನಾ ಸೋಂಕು ಗ್ರಾಮೀಣ ಭಾಗಗಳಲ್ಲೂ ವ್ಯಾಪಿಸಲು ಪ್ರಾರಂಭಿಸಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಪಿ 306 ಪೊಲೀಸ್ ಪೇದೆಯಿಂದ ಜಿಲ್ಲೆಯ ರತ್ನಾಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿತ್ತು. ಸ್ಯಾಂಪಲ್ಸ್ ವರದಿ ಬರುವ ಮೊದಲೇ ಅವರು ಸಾವನ್ನಪ್ಪಿದ್ದರು. ಇದು ಹಳ್ಳಿ ಜನರ ಆತಂಕಕ್ಕೆ ಕಾರಣವಾಗಿದೆ.
ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವನ್ನಪ್ಪಿದ್ದು ದೃಢವಾಗುತ್ತಿದ್ದಂತೆ ಗ್ರಾಮದಲ್ಲಿ ಆರೋಗ್ಯಾಧಿಕಾರಿಗಳು ಮೊಕ್ಕಂ ಹೂಡಿದ್ದು, ಪ್ರತಿಯೊಬ್ಬರನ್ನು ಸ್ಕ್ರೀನಿಂಗ್ ಮಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಒಂದು ವಾರದ ಅಂತರದಲ್ಲಿ 21 ಜನ ಕೊರೊನಾ ಶಂಕಿತರು ಪತ್ತೆಯಾಗಿದ್ದು, ಜಿಲ್ಲಾಡಳಿತ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದವರನೆಲ್ಲ ಹುಡುಕಿ ಕ್ವಾರಂಟೈನ್ಗೆ ಒಳಪಡಿಸುತ್ತಿದ್ದಾರೆ.