ವಿಜಯಪುರ: ಜಿಲ್ಲೆಯಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ 144 ಪ್ರಕರಣ ಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 1120ಕ್ಕೆ ಏರಿಕೆಯಾಗಿದ್ದು, ಬಿಡುಗಡೆಯಾದವರ ಸಂಖ್ಯೆ ಇಲ್ಲಿಯವರೆಗೆ 719 ಆಗಿದೆ.
ಇಂದು ಪತ್ತೆಯಾದ ಪ್ರಕರಣಗಳಲ್ಲಿ 77 ಪುರುಷರು, 49 ಮಹಿಳೆಯರು, 5 ಯುವತಿಯರು, ಓರ್ವ ಯುವಕ, 9 ಬಾಲಕರು, 3 ಬಾಲಕಿಯರು ಇದ್ದಾರೆ. ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಹೆಸ್ಕಾಂ ಸಿಬ್ಬಂದಿಗಳೇ ಹೆಚ್ಚು ಟಾರ್ಗೆಟ್ ಆಗಿದ್ದಾರೆ. ಕಂಟೈನ್ಮೆಂಟ್ ಪ್ರದೇಶಗಳಲ್ಲಿರುವ ಸೋಂಕಿತರಿಂದ ಇತರರಿಗೆ ಕೊರೊನಾ ಹರಡಿದೆ ಎಂಬ ಮಾಹಿತಿ ಇದೆ.
ಎಲ್ಲಾ ಪಾಸಿಟಿವ್ ಪೀಡಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೆಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನೂ 382 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೊರೊನಾದಿಂದ 65 ರೋಗಿಗಳು ಗುಣಮುಖರಾಗಿದ್ದು, ಇಲ್ಲಿಯವರೆಗೆ 719 ಸೋಂಕಿತರು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 19 ಜನರು ಕೊರೊನಾಗೆ ಬಲಿಯಾಗಿದ್ದಾರೆ.
ಜಿಲ್ಲಾಡಳಿತ ಇಲ್ಲಿಯವರೆಗೆ 39,616 ಜನರ ಮೇಲೆ ನಿಗಾ ಇರಿಸಿದೆ. ಇವರಲ್ಲಿ 37,509 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದೆ. 34,254 ಜನರ ವರದಿ ನೆಗೆಟಿವ್, 1,120 ಮಂದಿಗೆ ಪಾಸಿಟಿವ್ ಬಂದಿದೆ. ಇನ್ನೂ 2,135 ಜನರ ವರದಿ ಬರಬೇಕಿದ್ದು, 1,528 ಜನ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.