ETV Bharat / state

ವಿಜಯಪುರದಲ್ಲಿ ಪೊಲೀಸ್​ಗೆ ಕೊರೊನಾ... ಮದುವೆ ಮುಂದೂಡಿಕೆ, ಮದುಮಗಳಿಗೆ ಕ್ವಾರಂಟೈನ್​..! - ವಿಜಯಪುರದಲ್ಲಿ ಕೊರೊನಾ

ಪೊಲೀಸ್​ ಕಾನ್ಸ್​ಟೇಬಲ್​ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರ ಮದುವೆ ಮುಂದೂಡಿಕೆಯಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಅಲ್ಲದೆ, ಮದುಮಗಳನ್ನು ಕ್ವಾರಂಟೈನ್ ಮಾಡಲಾಗಿದೆ.

vijayapura corona
ವಿಜಯಪುರ ಕೊರೊನಾ
author img

By

Published : Jun 30, 2020, 12:06 PM IST

ವಿಜಯಪುರ: ಮದುಮಗನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮದುವೆ ಮುಂದೂಡಿದ ಪ್ರಸಂಗ ಜಿಲ್ಲೆಯಲ್ಲಿ ನಡೆದಿದೆ. ರೋಗಿ ಸಂಖ್ಯೆ 12,140 ಆದ 26 ವರ್ಷದ ಪೊಲೀಸ್ ಕಾನ್ಸ್​ಟೇಬಲ್​ಗೆ ಸೋಂಕು ಪತ್ತೆಯಾಗಿದ್ದರಿಂದ ಅವರ ಮದುವೆ ಕಾರ್ಯ ಮುಂದೂಡಿಕೆಯಾಗಿದೆ.

ವಿಜಯಪುರದಲ್ಲಿ ಪೊಲೀಸ್​ ಕಾನ್ಸ್​ಟೇಬಲ್​ಗೆ ಕೊರೊನಾ

ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಕಾನ್ಸ್​ಟೇಬಲ್​ನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕಾರಣ ಆರೋಗ್ಯ ಇಲಾಖೆಯಿಂದ ಸೋಂಕು ಪತ್ತೆ ಪರೀಕ್ಷೆ ನಡೆದಿತ್ತು. ಈಗ ಕೊರೊನಾ ದೃಢಪಟ್ಟ ಕಾರಣ ಮದುವೆಯನ್ನು ಮುಂದೂಡಲಾಗಿದೆ.

ಮದುವೆ ಮುಂದೂಡುವಂತೆ ಜಿಲ್ಲಾಡಳಿತ ಕುಟುಂಬಸ್ಥರಿಗೆ ತಿಳಿಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಮದುಮಗ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ. ವಧುವಿಗೂ ಕೂಡಾ ಕ್ವಾರಂಟೈನ್​ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.