ETV Bharat / state

ವಿಜಯಪುರದ 22 ಜನರಲ್ಲಿ ಕೊರೊನಾ ಪತ್ತೆ: 616ಕ್ಕೇರಿದ ಸೋಂಕಿತರು

author img

By

Published : Jul 7, 2020, 9:19 PM IST

ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ 22 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 616ಕ್ಕೆ ಏರಿಕೆಯಾಗಿದೆ

Corona infected in 22 people
22 ಜನರಲ್ಲಿ ಕೊರೊನಾ ಪತ್ತೆ

ವಿಜಯಪುರ: ಜಿಲ್ಲೆಯಲ್ಲಿ ಒಂದೇ ದಿನ 22 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 616ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾ ಪಾಸಿಟಿವ್ ಬಂದವರಲ್ಲಿ 15 ಪುರುಷರು, ಐವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿದ್ದಾರೆ. ಪಾಸಿಟಿವ್ ಬಂದವರು ಹೆಚ್ಚಾಗಿ ಕಂಟೈನ್​ಮೆಂಟ್​ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಸೋಂಕಿತರ ಸಂಪರ್ಕದಿಂದ 10 ಜನರಿಗೆ ಸೋಂಕು ತಗುಲಿದೆ. ಜ್ವರ ಹಾಗೂ ನೆಗಡಿಯಿಂದ ಬಳಲುತ್ತಿದ್ದ 9 ಜನರಲ್ಲಿ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಮತ್ತು ಬೆಳಗಾವಿಯಿಂದ ವಾಪಸ್ ಬಂದ ಪುರುಷನಲ್ಲಿ ಪಾಸಿಟಿವ್ ಕಂಡು ಬಂದಿದೆ.

ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಈವರೆಗೆ 11 ಜನ ಮೃತಪಟ್ಟಿದ್ದಾರೆ. ಇಂದು ಕೊರೊನಾದಿಂದ ಗುಣಮುಖರಾದ 18 ಜನ ಸೇರಿ 442 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಸೋಂಕಿಗೊಳಗಾದ 163 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.