ವಿಜಯಪುರ: ಬೇರೆ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಸ್ಕ್ಯಾನಿಂಗ್ ಮಾಡುವ ಮೂಲಕ ಕೊರೊನಾ ವೈರಸ್ ತಪಾಸಣೆಯನ್ನು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200 ರ ಗಡಿ ದಾಟಿದ ಪರಿಣಾಮ ಹಾಗೂ ಹೆಚ್ಚಾಗಿ ಮಹಾರಾಷ್ಟ್ರ ರಾಜ್ಯದಿಂದ ವಿಜಯಪುರ ಜಿಲ್ಲೆಗೆ ಆಗಮಿಸಿದವರಲ್ಲಿ ಸೋಂಕು ಪತ್ತೆಯಾಗುತ್ತಿರುವುರಿಂದ, ಆರೋಗ್ಯ ಇಲಾಖೆ ಸಿಬ್ಬಂದಿ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರ ಮಾಹಿತಿ ಪಡೆದು, ಸ್ಕ್ಯಾನಿಂಗ್ ಮಾಡುತ್ತಿದ್ದಾರೆ. ಇದೇ ವೇಳೆ ಪ್ರಯಾಣಿಕರಿಗೆ ಕಡ್ಡಾಯಾಗಿ ಮಾಸ್ಕ್ ಧರಿಸಿವಂತೆ ಸೂಚನೆ ನೀಡಲಾಗುತ್ತಿದೆ.
ಇನ್ನು ಬೇರೆ ಜಿಲ್ಲೆಗಳಿಂದ ಆಗಮಿಸಿದ ಪ್ರಯಾಣಿಕರು ಸಹ ಬಸ್ ನಿಲ್ದಾಣದಲ್ಲಿ ಕೊರೊನಾ ಟೆಸ್ಟ್ಗೆ ಒಳಗಾಗುತ್ತಿದ್ದಾರೆ. ಲಾಕ್ಡೌನ್ ಸಡಿಲಿಕೆಯಿಂದಾಗಿ ವಿಜಯಪುರದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗದಿರಲಿ ಎಂಬ ಕಾರಣಕ್ಕೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.