ವಿಜಯಪುರ: ಜಿಲ್ಲೆಯಲ್ಲಿ ಇಂದು 138 ಹೊಸದಾಗಿ ಪಾಸಿಟಿವ್ ದೃಢವಾಗಿದೆ. ಇಲ್ಲಿಯವರೆಗೆ 10,284 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 79 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 9,021 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 169ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 1,094 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,09,013 ಜನರ ಮೇಲೆ ನಿಗಾ ಇಡಲಾಗಿದೆ. 1,09,983 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 99,501 ಜನರ ವರದಿ ನೆಗೆಟಿವ್ ಆಗಿದೆ. 10,284 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.
ಇನ್ನೂ 287 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.