ವಿಜಯಪುರ: ಜಿಲ್ಲೆಯಲ್ಲಿ ಪೊಲೀಸರಿಗೆ ಕೊರೊನಾ ಮಹಾಕಂಟಕ ಎದುರಾಗಿದೆ. ಒಂದೇ ದಿನ 14 ಪೊಲೀಸರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಗಾಂಧಿಚೌಕ್ನ 6 ಪೊಲೀಸರಿಗೆ, ಡಿಎಸ್ಪಿ ಕಚೇರಿಯ ಇಬ್ಬರು, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಐವರು ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಕೊರೊನಾ ವರದಿ ಪಾಸಿಟಿವ್ ಬಂದಿವೆ.
ಈ ಹಿನ್ನೆಲೆಯಲ್ಲಿ ಡಿಎಸ್ಪಿ ಕಚೇರಿ, ಗಾಂಧಿಚೌಕ್, ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಸಶಸ್ತ್ರ ಮೀಸಲು ಪಡೆಯ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.