ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದ ಜಮೀನಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ರಾಜೇಸಾಬ್ ಅತ್ತಾರ (42) ಮೃತ ವ್ಯಕ್ತಿ, ಈತ ನಾಲತವಾಡ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಹಲವಾರು ವರ್ಷಗಳಿಂದ ಆಲೂರಿನಲ್ಲಿಯೇ ವಾಸವಾಗಿದ್ದ ರಾಜೇಸಾಬ್ ದೇಹದ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು,ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆ ಕೊಲೆಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.