ವಿಜಯಪುರ: ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್ ಹೆಚ್ 50 ರಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಭಯ್ಯಾಜಿ ಶಿಂಧೆ (50) ಹಾಗೂ ಅವರ ಪತ್ನಿ ಸುಮಿತ್ರಾ ಶಿಂಧೆ (45) ಮೃತ ದಂಪತಿ. ಘಟನೆಯಿಂದ ಇನ್ನೂ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಮಹಾರಾಷ್ಟ್ರದ ಸೊಲ್ಲಾಪುರ ಪಟ್ಟಣ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ.. ದೀಪಾವಳಿಗೆ ಹೊರಟ 15 ಮಂದಿಯ ದಾರುಣ ಸಾವು.. 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ ಇರುವ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.