ಮುದ್ದೇಬಿಹಾಳ: ತಾಲೂಕಿನ ಘಾಳಪೂಜಿ ಗ್ರಾಮದ ಕೆರೆಯ ಸುತ್ತಮುತ್ತ ಮೊಸಳೆಯೊಂದು ಓಡಾಡಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.
ಕಳೆದ ಹಲವಾರು ದಿನಗಳಿಂದ ಮೊಸಳೆ ಕೆರೆಯ ಸುತ್ತಮುತ್ತಲಿನಲ್ಲಿ ಓಡಾಡುತ್ತಿದ್ದು, ಜನ, ಜಾನುವಾರುಗಳ ಜೀವಕ್ಕೆ ಆಪತ್ತು ಎದುರಾಗಿದೆ. ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಕೆರೆಯಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಮೊಸಳೆ ಹಿಡಿಯಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಕೈ ಚೆಲ್ಲಿ ವಾಪಸ್ ಆಗಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಬಿಜ್ಜೂರ ಗ್ರಾಮ ಪಂಚಾಯಿತಿ ಪಿಡಿಒಗೆ ಪತ್ರದ ಮೂಲಕ ಮೊಸಳೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಮೊಸಳೆ ಸೆರೆ ಹಿಡಿಯದಿದ್ದರೆ ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.