ETV Bharat / state

ವಿಜಯಪುರದಲ್ಲಿ ಅಕ್ಕಿ-ಗೋಧಿ ವಿತರಣೆ ಆರಂಭ: ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಡಿಸಿ ಮನವಿ - corona in vijayapura

ಜಿಲ್ಲೆಯಾದ್ಯಂತ ಪಡಿತರ ಅಕ್ಕಿ ಹಾಗೂ ಗೋಧಿಯ ಹಂಚಿಕೆ ಆರಂಭಿಸಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಪಡೆಯುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮನವಿ ಮಾಡಿದ್ದಾರೆ. ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುವ ಶಾಬ್-ಎ-ಬರಾತ್ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲಾಗಿದೆ. ಜಿಲ್ಲೆಯಾದ್ಯಂತ ಕಳ್ಳಭಟ್ಟಿ ತಯಾರಿಕೆ ನಿಯಂತ್ರಣಕ್ಕೆ 283 ಕಡೆಗಳಲ್ಲಿ ದಾಳಿ ಮಾಡಿ 18 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.

DC_meeting  in vijayapura to understand present situation in districts
ಕೊರೊನಾ: ಜಿಲ್ಲೆಯ ಪ್ರಸ್ತುತ ಸ್ಥಿತಿಗತಿ ವಿಚಾರಣೆಗೆ ಜಿಲ್ಲಾಧಿಕಾರಿ ಸಭೆ
author img

By

Published : Apr 8, 2020, 11:37 PM IST

ವಿಜಯಪುರ: ಜಿಲ್ಲೆಯಾದ್ಯಂತ ಪಡಿತರ ಅಕ್ಕಿ ಹಾಗೂ ಗೋಧಿಯ ಹಂಚಿಕೆ ಆರಂಭಿಸಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಪಡೆಯುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ಕುರಿತು ಅಧಿಕಾರಿಗಳೊಂದಿಗೆ ಮುನ್ನೆಚ್ಚರಿಕಾ ಸಭೆ ನಡೆಸಿದ ಅವರು, ಜಿಲ್ಲೆಯಾದ್ಯಂತ ಪಡಿತರ, ತರಕಾರಿ ಮತ್ತು ಹಣ್ಣು, ಮೀನು ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ನಿಯಮ ಪಾಲಿಸಬೇಕು. ಅದರಂತೆ ಎಪಿಎಂಸಿ ವ್ಯಾಪ್ತಿಯಲ್ಲಿಯೂ ಪ್ರಕಟಣೆ ಮೂಲಕ ಸಾಮಾಜಿಕ ಅಂತರದೊಂದಿಗೆ ಚಟುವಟಿಕೆಗಳನ್ನು ನಡೆಸಬೇಕು. ರೈತರು ಸೇರಿದಂತೆ ವ್ಯಾಪಾರಸ್ಥರು ಮಾಸ್ಕ್ ಧರಿಸುವ ಮೂಲಕ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ತಿಳಿಸಿದರು.

ಅಲ್ಲದೆ ದ್ರಾಕ್ಷಿ ಆನ್‍ಲೈನ್ ಟ್ರೇಡಿಂಗ್‍ಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಡಿಪ್ಪಿಂಗ್ ಆಯಿಲ್‍ಗೆ ಸಂಬಂಧಿಸಿದಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆ ಪರಿಹರಿಸಬೇಕು. ಯಲಗೂರ ಗೋಶಾಲೆಯಲ್ಲಿರುವ 300 ಜಾನುವಾರುಗಳಿಗೆ ಮೇವು, ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ಜಿಲ್ಲೆಯಾದ್ಯಂತ ಮೀನು ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಪಾರ್ಸಲ್ ಪಡೆಯಲು ಮಾತ್ರ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ 47 ಕಡಲೆ ಖರೀದಿ ಕೇಂದ್ರ ಆರಂಭಿಸಬೇಕಾಗಿದ್ದು, ಈ ಪೈಕಿ 10 ಖರೀದಿ ಕೇಂದ್ರ ಆರಂಭಿಸಲಾಗಿದೆ. ಬಾಕಿ ಉಳಿದ ಖರೀದಿ ಕೇಂದ್ರಗಳನ್ನು ತಕ್ಷಣ ಆರಂಭಕ್ಕೆ ಕ್ರಮ ಕ್ರಮ ಕೈಗೊಳ್ಳಬೇಕು. ತೊಗರಿಯನ್ನು ಈಗಾಗಲೇ 79 ಸಾವಿರ ರೈತರಿಂದ ಖರೀದಿಸಲಾಗಿದ್ದು, ಬಾಕಿ ಉಳಿದ ರೈತರ ತೊಗರಿ ಖರೀದಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯ ಮತ್ತು ಅಗತ್ಯವಲ್ಲದ ವಸ್ತುಗಳಿಗೆ ಹಾಗೂ ನಗರದ ಒಳಗೆ ಅಗತ್ಯ ವಸ್ತುಗಳ ಸಾಗಾಣಿಕೆ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ ಕಳ್ಳಭಟ್ಟಿ ತಯಾರಿಕೆ ನಿಯಂತ್ರಣಕ್ಕೆ 283 ಕಡೆಗಳಲ್ಲಿ ದಾಳಿ ಮಾಡಿ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಲಾಕ್‍ಡೌನ್ ನಂತರ 4 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪೊಲೀಸ್ ಮತ್ತು ಅಬಕಾರಿ ಇಲಾಖೆಗಳ ಮೂಲಕ ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳ ಮೂಲಕ ವದಂತಿ ಹಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕೊರೊನಾ ನಿಯಂತ್ರಣ ಹೋರಾಟದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು, ಮಾಧ್ಯಮ ಪ್ರತಿನಿಧಿಗಳು ಈವರೆಗೆ ಸಹಕರಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ವದಂತಿಗಳ ಬಗ್ಗೆಯೂ ಮಾಹಿತಿ ನೀಡಿ ಸಹಕರಿಸಬೇಕು. ಜಾಲತಾಣಗಳಲ್ಲಿ ಅವಹೇಳಕಾರಿಯಾದ ವಿಡಿಯೋಗಳನ್ನು, ಆಡಿಯೋಗಳನ್ನು ಹಂಚಿಕೆ ಮಾಡಿಕೊಳ್ಳದಂತೆ ತಿಳಿಸಿರುವ ಅವರು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವ ಶಾಬ್-ಎ-ಬರಾತ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲಾಗಿದೆ. ಕೋವಿಡ್-19 ಅಪಾಯ ಇರುವ ಹಿನ್ನೆಲೆಯಲ್ಲಿ ಎಲ್ಲರೂ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕಾದ ಅವಶ್ಯಕತೆಯಿದ್ದು, ಮಸೀದಿ ಹಾಗೂ ಮುಸ್ಲಿಂ ಖಬರಸ್ಥಾನ್​ಗಳಿಗೆ ಪ್ರಾರ್ಥನೆಗಾಗಿ ಹೋಗದೆ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸುವ ಮೂಲಕ ಸೂಕ್ತ ಜಾಗೃತಿ ವಹಿಸಿಕೊಳ್ಳುವಂತೆ ಸಲಹೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.