ವಿಜಯಪುರ: ಜಿಲ್ಲೆಯಲ್ಲಿ ಮಕ್ಕಳಿಗೆ ಹೆಚ್ಚಾಗಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗಳಿಗೆ ಒಂದು ವಾರ ರಜೆ ಘೋಷಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ 0-21ವರ್ಷದ ಒಳಗಿನ ಒಟ್ಟು 150 ಮಕ್ಕಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಂದೇ ಶಾಲೆಯಲ್ಲಿ ಐದಕ್ಕಿಂತ ಹೆಚ್ಚು ಮಕ್ಕಳಲ್ಲಿ ಕೋವಿಡ್ ಬಂದಿದ್ದರೆ ಅಂಥ ಶಾಲೆಗಳನ್ನು ಕ್ಲಸ್ಟರ್ ಶಾಲೆಗಳಾಗಿ ಪರಿಗಣಿಸಿ ಆ ಶಾಲೆಗಳಿಗೆ ಒಂದು ವಾರದ ಮಟ್ಟಿಗೆ ರಜೆ ಘೋಷಣೆ ಮಾಡಲಾಗುವುದು ಎಂದರು.
ಕೋವಿಡ್ ಸೋಂಕು ತಗುಲಿದ ಮಕ್ಕಳು ಆರೋಗ್ಯ ಸುಧಾರಿಸಿದರೆ ಶಾಲೆಗೆ ಬರಬಹುದು. ವಿಶ್ರಾಂತಿ, ಹೆಚ್ಚಿನ ಚಿಕಿತ್ಸೆಯ ಅವಶ್ಯವಿದ್ದಲ್ಲಿ ವಿದ್ಯಾರ್ಥಿಗಳಿಗೆ ಇನ್ನಷ್ಟು ದಿನ ರಜೆಯ ವಿನಾಯಿತಿ ನೀಡುವ ತೀರ್ಮಾನವನ್ನು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಕೈಗೊಳ್ಳಲಿದ್ದಾರೆ ಎಂದರು.
ಜ.1ರಿಂದ ಇಲ್ಲಿಯವರೆಗೆ ಸುಮಾರು 664 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಅದರಲ್ಲಿ 150 ಮಕ್ಕಳಿಗೆ ಕೋವಿಡ್ ತಗುಲಿದೆ. ಒಟ್ಟು ಪ್ರಕರಣದಲ್ಲಿ ಶೇ. 20ರಷ್ಟು ಮಕ್ಕಳಲ್ಲಿ ಈ ರೋಗ ಕಾಣಿಸಿಕೊಂಡಿದೆ ಎಂದರು.
ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ.. ವಿಜಯಪುರ ಜಿಲ್ಲೆಯಲ್ಲಿ ಹರಿದ ನೆತ್ತರು