ETV Bharat / state

ಕೋವಿಡ್ ಸೆಂಟರ್ ಗೆ ಜಿಲ್ಲಾಧಿಕಾರಿ ಭೇಟಿ: ಅಧಿಕಾರಿಗಳೊಂದಿಗೆ ಡಿಸಿ ಸಭೆ

ವಿಜಯಪುರ ಜಿಲ್ಲಾಧಿಕಾರಿಗಳು ಕೋವಿಡ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

DC visits covid center
DC visits covid center
author img

By

Published : Aug 9, 2020, 11:23 AM IST

ವಿಜಯಪುರ: ಕೊರೊನಾ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯಲ್ಲೂ ಹೋಮ್ ಕ್ವಾರಂಟೈನ್ ಹಾಗೂ ಹೋಮ್ ಐಸೋಲೇಷನ್ ನಿಯಮಗಳ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂಡಿ ಉಪವಿಭಾಗದ ತಹಶೀಲ್ದಾರರು, ತಾಲೂಕಾ ಆರೋಗ್ಯಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಕುರಿತಂತೆ ಸಭೆ ನಡೆಸಿ ಅವರು ಮಾತನಾಡಿದರು.

ಕೋವಿಡ್ ನಿಯಂತ್ರಣಕ್ಕಾಗಿ ಯಾವುದೇ ರೀತಿಯ ಹೋಮ್ ಕ್ವಾರಂಟೈನ್ ಮತ್ತು ಹೋಮ್ ಐಸೋಲೇಷನ್ ನಿಯಮಗಳು ಮತ್ತು ಸರ್ಕಾರದ ನಿರ್ದೇಶನಗಳು ಉಲ್ಲಂಘನೆಯಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಒಂದು ವೇಳೆ ಉಲ್ಲಂಘನೆಯಾದಲ್ಲಿ ತಕ್ಷಣ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದರು.

ಕೋವಿಡ್‌ನ್ನು ನಿಯಂತ್ರಿಸಲು ಹೆಚ್ಚು ಹೆಚ್ಚು ಸ್ವ್ಯಾಬ್ ಸಂಗ್ರಹವನ್ನು ಮಾಡಲು ಕ್ರಮ ಕೈಗೊಳ್ಳಬೇಕು. ಸೋಂಕಿತರೊಂದಿಗೆ ಸಂಪರ್ಕಗಳನ್ನು ಪರಿಣಾಮಕಾರಿಯಾಗಿ ಪತ್ತೆ ಹಚ್ಚಬೇಕು. ಹೋಮ್ ಕ್ವಾರಂಟೈನ್ ವಾಚ್ ಹಾಗೂ ಕಾಂಟ್ಯಾಕ್ಟ್ ಟ್ರೇಸಿಂಗ್ ಆ್ಯಪ್‌ಗಳನ್ನು ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಲು ಎಂದು ಸೂಚಿಸಿದರು.

ಗಣೇಶ ಹಬ್ಬ ಆಚರಣೆಗೆ ನಿಷೇಧ:

ಕೋವಿಡ್ ಹಿನ್ನೆಲೆಯಲ್ಲಿ ಮುಂಬರುವ ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಲು ನಿಷೇಧವಿದ್ದು, ಸಾರ್ವಜನಿಕರು ಗಣೇಶ ಮೂರ್ತಿಯನ್ನು ಮನೆಯಲ್ಲೇ ಶ್ರದ್ಧಾಭಕ್ತಿಯೊಂದಿಗೆ ಪ್ರತಿಷ್ಠಾಪಿಸಿ ಅವಶ್ಯಕ ಮುನ್ನೆಚ್ಚರಿಕೆ ಮತ್ತು ಮುಂಜಾಗ್ರತೆಗಳೊಂದಿಗೆ ಗಣೇಶ ನಿಮಜ್ಜನ ಆಗುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಮುಖ್ಯಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳಿಗೆ ಹೇಳಿದರು.

ಕೋವಿಡ್ ಸೆಂಟರ್ ಗೆ ಡಿಸಿ ಭೇಟಿ:

ಜಿಲ್ಲಾಧಿಕಾರಿಗಳು ಇದಕ್ಕೂ ಮುನ್ನ ಸಿಂದಗಿ ಗೋಲಗೇರಿ ರಸ್ತೆಯಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಿ ಪಾಸಿಟಿವ್ ರೋಗಿಗಳ ಆರೋಗ್ಯ ಮತ್ತು ಯೋಗಕ್ಷೇಮ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ತಾಲೂಕಾ ಪ್ರಗತಿ ಪರಿಶೀಲನೆ ಮತ್ತು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಉಪವಿಭಾಗಾಧಿಕಾರಿ ಸ್ನೇಹಲ್ ಲೋಖಂಡೆ, ಕಂದಾಯ ಇಲಾಖೆಯ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.