ETV Bharat / state

ಪುನರ್‌ ನಿರ್ಮಾಣ ಕಾಮಗಾರಿ ಆದ್ಯತೆಯನುಸಾರ ಪೂರ್ಣಗೊಳಿಸಲು ಡಿಸಿಎಂ ಕಾರಜೋಳ ಸೂಚನೆ - ಪ್ರಗತಿ ಪರಿಶೀಲನಾ ಸಭೆ

ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿಎಂ ಗೋವಿಂದ ಕಾರಜೋಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

dcm govinda karjola
ಕಾರಜೋಳ
author img

By

Published : May 18, 2020, 7:16 PM IST

Updated : May 18, 2020, 7:25 PM IST

ವಿಜಯಪುರ: ಪ್ರವಾಹದಿಂದ ಹಾನಿಗೊಳಗಾದ ಪುನರ್‌ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಮತ್ತು ಲೋಕೊಪಯೋಗಿ ಹಾಗೂ ಸಮಾಜಕಲ್ಯಾಣ ಸಚಿವರೂ ಆದ ಗೋವಿಂದ ಕಾರಜೋಳ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಲೋಕೊಪಯೋಗಿ ಇಲಾಖೆ, ಸಮಾಜಕಲ್ಯಾಣ ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ನೆರೆಹಾವಳಿ ಸಂದರ್ಭದಲ್ಲಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕಾಮಗಾರಿಗಳು, ಚಾಲ್ತಿಯಲ್ಲಿರುವ ಕಾಮಗಾರಿಗಳು ಮತ್ತು ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಆದ್ಯತೆ ನೀಡಿ ಗುಣಮಟ್ಟದ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ಜಿಲ್ಲೆಯ 8 ವಿಧಾನಸಭಾ ಕ್ಷೇತ್ರವಾರು ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಬೇಕು. ನೂತನ ಕಾಮಗಾರಿಗಳ ಟೆಂಡರ್‌ಗೆ ಸಂಬಂಧಪಟ್ಟ ಹಣಕಾಸು ಇಲಾಖೆಯ ಅನುಮತಿಯಿಂದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ವಸತಿ ಶಾಲೆ, ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಬೇಕು. ಕೋವಿಡ್-19 ಲಾಕ್‍ಡೌನ್ ಜಾರಿ ಮತ್ತು ಸಂಕಷ್ಟ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ರಸ್ತೆ ಮತ್ತು ಚರಂಡಿ ಕೆಲಸಗಳನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳಬೇಡಿ ಎಂದಿದ್ದಾರೆ.

ವಿಜಯಪುರ ಮತ್ತು ಹುಬ್ಬಳ್ಳಿ ಹೆದ್ದಾರಿ ನಿರ್ಮಿಸಲಾಗಿದ್ದು, ಇದರಡಿ ಶಿಲ್ಕು ಉಳಿದಿರುವ 40 ಕೋಟಿ ರೂ. ಪುನರ್‌ಬಳಕೆಗೆ ಸಂಬಂಧಪಟ್ಟಂತೆ ಈಗಾಗಲೇ ಕಳುಹಿಸಲಾಗಿರುವ ಪ್ರಸ್ತಾವನೆ ಮಂಜೂರಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವಿಜಯಪುರ-ಕಾರಜೋಳ ಮಧ್ಯದ 21 ಕೀ.ಮೀ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಹೊಂದಲು ಹೆಚ್ಚುವರಿ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಅನುದಾನ ಬೇಡಿಕೆ, ಪರಿಷ್ಕೃತ ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರರಿಗೆ ಹೇಳಿದರು.

ವಿಜಯಪುರ ನಗರದ ಇಟಗಿ ಪೆಟ್ರೋಲ್ ಪಂಪ್‍ದಿಂದ ಗೋದಾವರಿ ಹೋಟೆಲ್‍ವರೆಗೆ ನಿರ್ಮಿಸಬೇಕಾದ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಸ್ತಾವನೆಗೆ ಅನುಮೋದನೆ ಪಡೆದು ಕಾಮಗಾರಿ ಆರಂಭಕ್ಕೆ ವಿಶೇಷ ಗಮನವನ್ನು ನೀಡುವಂತೆ ತಿಳಿಸುತ್ತಾ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ರಸ್ತೆ ಸುಧಾರಣೆಗೆ ವಿಶೇಷ ಒತ್ತು ನೀಡುತ್ತಿದ್ದು, ಕೋವಿಡ್-19 ಸಂಕಷ್ಟ ಪರಿಸ್ಥಿತಿಯಿಂದಾಗಿ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದ್ದು, ಕೋವಿಡ್-19 ಪರಿಸ್ಥಿತಿ ಸುಧಾರಣೆಗೊಂಡ ನಂತರ ಆದ್ಯತೆ ಮೇಲೆ ಈ ಕಾಮಗಾರಿಗಳಿಗೆ ಗಮನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಧಾನಸಭ ಕ್ಷೇತ್ರವಾರು ರಸ್ತೆಗಳ ನಿರ್ಮಾಣ, ರಾಜ್ಯ ಹೆದ್ದಾರಿ ಸುಧಾರಣೆ, ನವೀಕರಣ, ಏಷಿಯನ್ ಡೆವೆಲಪ್‍ಮೆಂಟ್ ಬ್ಯಾಂಕ್ ನೆರವಿನ ಕಾಮಗಾರಿಗಳು, ಜಿಲ್ಲಾ ಮುಖ್ಯರಸ್ತೆ ಸೇತುವೆ ಸುಧಾರಣಾ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.

ರಸ್ತೆಯ ಬದಿ ಚರ್ಮಗಾರಿಕೆ (ಚಮ್ಮಾರಿಕೆ) ಮಾಡುವ ಬಡ ಕೂಲಿಗಾರಿಕೆ ಕುಟುಂಬಗಳ ನೆರವಿಗಾಗಿ ಈಗಾಗಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಾಗೂ ಮುಖ್ಯಮಂತ್ರಿಗಳ ಸಲಹೆ ಮೇರೆಗೆ ಪ್ರತಿಯೊಬ್ಬರಿಗೆ 5 ಸಾವಿರ ರೂಪಾಯಿಗಳನ್ನು ಆರ್‍ಟಿಜಿಎಸ್ ಮೂಲಕ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸಮಾಜ ಕಲ್ಯಾಣ ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಮಂಜೂರಾಗಿರುವ ಮತ್ತು ಅವಶ್ಯಕತೆ ಇರುವ ನಿವೇಶನ ಮಾಹಿತಿಯನ್ನು ಸಲ್ಲಿಸಬೇಕು. ಈಗಾಗಲೇ ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯ ಕೋವಿಡ್-19 ಹಿನ್ನೆಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಬಳಸಲಾಗುತ್ತಿರುವ ವಸತಿ ಶಾಲೆ, ವಸತಿ ನಿಲಯಗಳಲ್ಲಿ ಜನರಿಗೆ ಊಟ, ಉಪಹಾರ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಭೂ ಒಡೆತನ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಜಮಿನು ನೀಡುವ ಕುರಿತಂತೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬೆಳಗಾವಿ ಉಪ ಪ್ರಧಾನ ವ್ಯವಸ್ಥಾಪಕರಿಗೆ ಇರುವ ಪ್ರಸ್ಥಾವನೆ ಪರಿಶೀಲಿಸುವ ಅಧಿಕಾರವನ್ನು ಮೊಟಕುಗೊಳಿಸಿ ಜಿಲ್ಲಾಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅವರು ಸಾರ್ವಜನಿಕರ ಅಹವಾಲು ಆಲಿಸಿದರು. ಬೀದಿ ಬದಿ ಚರ್ಮಗಾರಿಕೆ(ಚಮ್ಮಾರಿಕೆ) ಮಾಡುವ ಬಡ ಕುಟುಂಬಗಳಿಗೆ ಮಂಜೂರಾದ 5000 ರೂ.ಗಳ ಮಂಜೂರಾತಿ ಪತ್ರವನ್ನು ಇಂದು ವಿತರಿಸಿದರು.

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಬಿ.ಬಿ ಪಾಟೀಲ, ಸಹಾಯಕ ಅಭಿಯಂತರರಾದ ಆರ್.ಕೆ ಮಜುಂದಾರ್, ಆರ್.ಕೆ ಕತ್ತಿ, ಎಸ್.ಎನ್ ಕರೂರ, ಎಂ.ಎಸ್ ನಿಡೋಣಿ, ಜಿ.ಎಸ್ ಪಾಟೀಲ ಇದ್ದರು.

Last Updated : May 18, 2020, 7:25 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.