ವಿಜಯಪುರ: ಮದಬಾವಿ - ಬುರಣಾಪುರ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಪ್ರಥಮ ಹಂತದ ಕಾಮಗಾರಿ ವೇಗವಾಗಿ ನಡೆಯುತ್ತಿವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ವಿಮಾನ ನಿಲ್ದಾಣ ಕಾಮಗಾರಿ ಮೊದಲ ಹಂತದ ಕಾಮಗಾರಿ ಪರಿಶೀಲಿಸಿದ ಅವರು , ಈ ಕಾಮಗಾರಿ ವೇಗವಾಗಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಶೀಘ್ರದಲ್ಲಿ ಟೆಂಡರ್ ಕರೆಯುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷವಾದ ಟರ್ಮಿನಲ್ ಕಟ್ಟಡ ನಕಾಶೆ ಸಿದ್ಧಪಡಿಸಿ ಟೆಂಡರ್ ಕರೆಯುವ ಬಗ್ಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಲೋಕೋಪಯೋಗಿ ಇಲಾಖೆ ಮುಖ್ಯ ಅಭಿಯಂತರ ಎಸ್ ಎಫ್ ಪಾಟೀಲ್ ಹಾಗೂ ಅಧೀಕ್ಷಕ ಅಭಿಯಂತರ ಬಿ ಪವಾರ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಮಜುಂದಾರ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.