ವಿಜಯಪುರ: ಇಂಡಿ ಪಟ್ಟಣದ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯನಿರತ ಅಗ್ನಿ ಶಾಮಕ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.
ಶ್ರೀಶೈಲ್ ಬಿರಾದಾರ್ (36) ಹೃದಯಾಘಾತದಿಂದ ಸಾವನ್ನಪ್ಪಿರುವ ಅಗ್ನಿಶಾಮಕದಳದ ಸಿಬ್ಬಂದಿ. ಠಾಣೆಯಲ್ಲಿ ಕರ್ತವ್ಯದ ಮೇಲಿರುವಾಗಲೇ ಹೃದಯಾಘಾತವಾಗಿತ್ತು.ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ರಸ್ತೆ ಮಧ್ಯೆ ಸಾವನ್ನಪ್ಪಿದ್ದಾರೆ.
ಮೃತ ಅಗ್ನಿಶಾಮಕದಳದ ಸಿಬ್ಬಂದಿ ಶ್ರೀಶೈಲ ಬಿರಾದಾರ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ನಿವಾಸಿಯಾಗಿದ್ದರು. ಇಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.