ವಿಜಯಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿನಿಯರಲ್ಲೂ ಕೊರೊನಾ ದೃಢಪಟ್ಟಿರುವ ಹಿನ್ನೆಲೆ, ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಒಂದು ವಾರದ ಮಟ್ಟಿಗೆ ರಜೆ ಘೋಷಣೆ ಮಾಡಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಐದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅಂತಹ ಶಾಲೆ, ಕಾಲೇಜು, ವಿದ್ಯಾಲಯಗಳಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರದ ಮಾರ್ಗಸೂಚಿ ಇರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟ ಕಾರಣ, ಜನವರಿ 21 ರಿಂದ ಜ. 27ರವರೆಗೆ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಿಗೂ ರಜೆ ಘೋಷಣೆ ಮಾಡಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಎರಡು ಆ್ಯಂಬುಲೆನ್ಸ್ಗೆ ದಾರಿ ಬಿಡದೆ ಉದ್ಧಟತನ ಮೆರೆದಿದ್ದ ಕಾರು ಚಾಲಕ ಅಂದರ್
ಬೋಧಕ, ಬೋಧಕೇತರ ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಿರುವ ಮುಖ್ಯಸ್ಥರು, ತುರ್ತು ಕೆಲಸ ಕಾರ್ಯವಿದ್ದಾಗ ಕಚೇರಿಯಿಂದ ಕಾರ್ಯ ನಿರ್ವಹಿಸುವಂತೆ ಆದೇಶ ಹೊರಡಿಸಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ