ETV Bharat / state

ವಿಜಯಪುರ ಜಿಲ್ಲಾಸ್ಪತ್ರೆಗೆ 4 ಆಕ್ಸಿಜನ್ ಕಾನ್ಸಂಟ್ರೇಟರ್​​ಗಳ ಪೂರೈಕೆ

ವಿಜಯಪುರ ಜಿಲ್ಲೆಗೆ ಒಟ್ಟು 4 ಆಕ್ಸಿಜನ್ ಕಾನ್ಸಂಟ್ರೇಟರ್​​ಗಳನ್ನು ಬೆಂಗಳೂರಿನಿಂದ ತರಿಸಿದ್ದು, ಜನಸಾಮಾನ್ಯರಿಗೆ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗಿಗಳ ಅನುಕೂಲಕ್ಕಾಗಿ ಜಿಲ್ಲಾಸ್ಪತ್ರೆಗೆ ನೀಡಲಾಗಿದೆ.

Vijapur
Vijapur
author img

By

Published : May 12, 2021, 4:27 PM IST

ವಿಜಯಪುರ: ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತಕ್ಕೆ ಪೊಲೀಸ್ ಇಲಾಖೆಯಿಂದ ನೀಡಿದ 4 ಆಕ್ಸಿಜನ್ ಕಾನ್ಸಂಟ್ರೇಟರ್​​ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್, ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರಿಗೆ ಹಸ್ತಾಂತರಿಸಿದರು.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಹಾಗಾಗಿ ವಿವಿಧ ಸಂಘ-ಸಂಸ್ಥೆಗಳು ಆಕ್ಸಿಜನ್ ಒದಗಿಸುತ್ತಿದ್ದು, ಇಂತಹ‌ ಸಂಘ-ಸಂಸ್ಥೆಗಳಲ್ಲಿ ಬೆಂಗಳೂರಿನ 2 ಗ್ರೂಪ್​ನವರು ಸಿಎಸ್ಆರ್ ಯೋಜನೆಯ ಅಡಿಯಲ್ಲಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರಿಗೆ ನೀಡಿದ್ದು, ಇವರು ಕಾನ್ಸಂಟ್ರೇಟರ್​​ಗಳ ಮುತುವರ್ಜಿ ವಹಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ನೀಡಲಾಗಿದೆ.

ಅದರಂತೆ ಈ ಆಕ್ಸಿಜನ್ ಕಾನ್ಸಂಟ್ರೇಟರ್​​ಗಳನ್ನು ಕೋವಿಡ್ ರೋಗಿಗಳಿಗಾಗಿ ಪೊಲೀಸ್ ವರಿಷ್ಠಾಧಿಕಾರಿ ಅಗರವಾಲ್ ಇಂದು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಸ್ತಾಂತರಿಸಿದರು. ವಿಜಯಪುರ ಜಿಲ್ಲೆಗೆ ಒಟ್ಟು 4 ಆಕ್ಸಿಜನ್ ಕಾನ್ಸಂಟ್ರೇಟರ್​​ಗಳನ್ನು ಬೆಂಗಳೂರಿನಿಂದ ತರಿಸಿದ್ದು, ಜನಸಾಮಾನ್ಯರಿಗೆ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗಿಗಳ ಅನುಕೂಲಕ್ಕಾಗಿ ಜಿಲ್ಲಾಸ್ಪತ್ರೆಗೆ ನೀಡಲಾಗಿದೆ. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶರಣಪ್ಪ ಕಟ್ಟಿ, ಡಾ. ಲಕ್ಕಣ್ಣವರ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.