ವಿಜಯಪುರ: ಇಂಡಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ವಸತಿನಿಲಯದ ಪೀಠೋಪಕರಣ ಸುಟ್ಟು ಭಸ್ಮವಾಗಿದೆ.
ಅಭ್ಯಾಸ ಮತ್ತು ಗಣಕಯಂತ್ರದ ಕೊಠಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೊದಲ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕಿಟಕಿ ಮೂಲಕ ಜ್ವಾಲೆಯಾಗಿ ಹೊರ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು.
ವಿದ್ಯಾರ್ಥಿನಿಯರು ಅಭ್ಯಾಸ ಮಾಡುವ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ: ಯಾದಗಿರಿ: ಭಾರಿ ಅಗ್ನಿ ಅವಘಡ, 112 ವಾಹನ ಸಿಬ್ಬಂದಿಯಿಂದ ನಾಲ್ವರ ರಕ್ಷಣೆ