ವಿಜಯಪುರ: ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆಯುವ ಕೃಷಿ ಮೇಳಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಲನೆ ನೀಡಿದರು.
ನಗರದ ಹೊರವಲಯದಲ್ಲಿರುವ ಹಿಟ್ನಳ್ಳಿಯ ಕೃಷಿ ವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ ಕೃಷಿ ಮೇಳ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಸಾವಯುವ ಕೃಷಿಗೆ ರೈತರು ಒತ್ತು ನೀಡಬೇಕು. ಹನಿ ನೀರಾವರಿ ಪದ್ದತಿಯನ್ನು ಕೃಷಿಯಲ್ಲಿ ಅನುಕರಣೆ ಮಾಡಿಕೊಂಡು ಭೂಮಿಯ ಫಲವತ್ತತೆಯನ್ನು ಕಾಯಬೇಕು ಎಂದು ತಿಳಿಸಿದರು. ಇನ್ನು ರೈತರು ಬಡ್ಡಿ ರಹಿತ ಸಾಲ ಪಡೆಯುತ್ತಿರುವುದು ನನಗೆ ಖುಷಿಕರವಾದ ಸಂಗತಿ ಎಂದರು.
ಇನ್ನು ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಅರುಣ ಶಹಾಪುರ, ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ್, ಸಂಸದ ರಮೇಶ್ ಜಿಗಜಿಣಗಿ, ಹಾಗೂ ಕೃಷಿ ವಿವಿ ಧಾರವಾಡ ಕುಲಪತಿ ಮಹಾದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.