ವಿಜಯಪುರ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ್ದಕ್ಕೆ ದೇಶ ರಕ್ಷಣಾ ಪಡೆಯ ಕಾರ್ಯಕರ್ತೆಯರು ಸಂಭ್ರಮಾಚರಣೆ ಮಾಡಿದರು.
ನಗರದ ಮಾಜರೇಕರ್ ಚಾಳದಲ್ಲಿ ದೇಶ ರಕ್ಷಣಾ ಪಡೆ ಮಹಿಳಾ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ದೇಶದ ಪರ ಘೋಷಣೆ ಕೂಗಿ ಸಂಭ್ರಮಿಸಿದರು. ಅತ್ಯಾಚಾರಿಗಳನ್ನು ಗಲ್ಲಿಗೆ ಹಾಕುವ ಕಾನೂನು ಸರ್ಕಾರ ಜಾರಿ ಮಾಡಬೇಕು. ಆಗ ದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿರುತ್ತಾರೆ. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ದೇಶ ರಕ್ಷಣಾ ಪಡೆ ಮಹಿಳೆಯರು ಸರ್ಕಾರಕ್ಕೆ ಒತ್ತಾಯಿಸಿದರು.
ಇನ್ನು ದೇಶದಲ್ಲಿ ಅನೇಕ ಅತ್ಯಾಚಾರ ಪ್ರಕರಣಗಳು ನಡೆದಿವೆ. ಅವುಗಳ ತನಿಖೆ ನಡೆಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.