ಮುದ್ದೇಬಿಹಾಳ: ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆದಿದ್ದು, ಧಾರವಾಡ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ಮುದ್ದೇಬಿಹಾಳದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದರು.
ಪಟ್ಟಣದ ಜ್ಞಾನ ಭಾರತಿ ವಿದ್ಯಾಮಂದಿರ, ಎಸ್.ಎಸ್.ಶಿವಾಚಾರ್ಯ ಪ.ಪೂ ಕಾಲೇಜು ಹಾಗು ಎಂಜಿವಿಸಿ ಕಾಲೇಜಿನಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿತ್ತು. ಕಡ್ಡಾಯವಾಗಿ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರದೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು.
ಲ್ಯಾಬ್ ಕೊಠಡಿಯಲ್ಲಿ ಪರೀಕ್ಷೆ:
ಅನ್ಯ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕೊಠಡಿ ಕಾಯ್ದಿರಿಸಿದ್ದ ಕಾಲೇಜಿನವರು, ವಿಜ್ಞಾನ ವಿಭಾಗದ ಲ್ಯಾಬ್ ಕೊಠಡಿಯಲ್ಲಿ ಸಹ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಟ್ಟ ದೃಶ್ಯ ಕಂಡುಬಂದಿತು.