ವಿಜಯಪುರ : ನಗರದಲ್ಲಿರುವ ಜಿಲ್ಲಾಸ್ಪತ್ರೆ, ಬಿಎಲ್ಡಿಈ ವೈದ್ಯಕೀಯ ಮಹಾವಿದ್ಯಾಲಯ, ಆಲ್‍ಮಿನ್ ಮೆಡಿಕಲ್ ಕಾಲೇಜು ಹಾಗೂ ನಾಲ್ಕು ಸರ್ಕಾರಿ ತಾಲೂಕು ಆಸ್ಪತ್ರೆಯಗಳಲ್ಲಿ ಇಂದಿನಿಂದ ಕೊರೊನಾ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
ಇಂದಿನಿಂದ 60 ವರ್ಷ ಮೇಲ್ಪಟ್ಟ ನಾಗರಿಕರು ಹಾಗೂ ಕೋ ಮಾರ್ಬಿಡಿಟಿ (ಬೇರೆ ರೋಗ ಇರುವವರು) ಇರುವ 45 ರಿಂದ 59 ವರ್ಷದದೊಳಗಿನವರಿಗೆ ಲಸಿಕೆ ನೀಡಲಾಗುವುದು. ಸಾರ್ವಜನಿಕರು ಕೋವಿಡ್-19 ಲಸಿಕೆ ಪಡೆಯಲು ಕಡ್ಡಾಯವಾಗಿ ಆನ್‍ಲೈನ್ ಮುಖಾಂತರ ನೋಂದಣಿ ಮಾಡಿಸಬೇಕು.
ಸಾರ್ವಜನಿಕರು ನೋಂದಣಿಗಾಗಿ ಆಧಾರ್ ಕಾರ್ಡ್, ವೋಟರ್ ಐಡಿ, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಮತ್ತಿತರ ಗುರುತಿನ ಚೀಟಿಗಳನ್ನು ತೆಗೆದುಕೊಂಡು ಹೋಗಿ ಲಸಿಕೆ ಪಡೆಯಬೇಕು.
ಓದಿ: ಕೋವಿಡ್-ಲಾಕ್ಡೌನ್ ಹೊಡೆತ : ಬಾಲ ಕಾರ್ಮಿಕರ ಸಂಖ್ಯೆಯಲ್ಲಿ ಹೆಚ್ಚಳ
ಈ ಲಸಿಕೆಗೆ ಖಾಸಗಿ ಆಸ್ಪತ್ರೆಗಳಲ್ಲಿ 250 ರೂ. ಫೀ ಇರುತ್ತದೆ. ಜಿಲ್ಲಾಸ್ಪತ್ರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.