ವಿಜಯಪುರ: ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ಅಮಾನತಿನಲ್ಲಿಡುವ, ದುರ್ಬಲಗೊಳಿಸುವ ಕ್ರಮಗಳನ್ನ ಕೈ ಬಿಡುವಂತೆ ಒತ್ತಾಯಿಸಿ ಎಐಯುಟಿಯುಸಿ (ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ) ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅಲ್ಲದೇ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಸೂಕ್ತ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗುವಂತೆ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮನವಿ ಫಲಕ ಹಿಡಿದು ಅಧಿಕಾರಿಗಳ ಗಮನ ಸೆಳೆದರು.
ಸರ್ಕಾರ ಸಂಘಟಿತ ಹಾಗೂ ಸಂಘಟಿತವಲ್ಲದ ಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನ ರೂಪಿಸಿ, ಕಾರ್ಮಿಕ ಸೇವಾ ಭತ್ಯೆಗಳನ್ನ ಸರ್ಕಾರ ನೀಡಲು ಮುಂದಾಗಬೇಕು ಹಾಗೂ ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಿ ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.