ETV Bharat / state

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಗಮನ ನೀಡಿ: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ

author img

By

Published : Nov 27, 2019, 11:19 AM IST

ಮನೆ-ಮನೆಯಿಂದ ಕಸ ಸಂಗ್ರಹಣೆ, ತ್ಯಾಜ್ಯಗಳ ವಿಂಗಡಣೆ ಹಾಗೂ ಸಂಸ್ಕರಣಾ ಚಟುವಟಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

District Collector Y.S Patil Notice
ಅಚ್ಚುಕಟ್ಟಾಗಿ ಕಸ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ

ವಿಜಯಪುರ: ಮನೆ-ಮನೆಯಿಂದ ಕಸ ಸಂಗ್ರಹಣೆ, ತ್ಯಾಜ್ಯಗಳ ವಿಂಗಡಣೆ ಹಾಗೂ ಸಂಸ್ಕರಣಾ ಚಟುವಟಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ತಪ್ಪದೇ ಮನೆ-ಮನೆಯಿಂದ ಕಸ ಸಂಗ್ರಹಣೆ, ಘನತ್ಯಾಜ್ಯಗಳ ವಿಂಗಡಣೆ ಹಾಗೂ ಸಂಸ್ಕರಣಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಜೊತೆಗೆ ಪ್ಲಾಸ್ಟಿಕ್ ಮುಕ್ತ ಜಿಲ್ಲೆ ಹಾಗೂ ನಗರಗಳನ್ನಾಗಿ ರೂಪಿಸಲು ವಿಶೇಷ ಗಮನ ನೀಡುವಂತೆ ಸೂಚಿಸಿದರು.

ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಬಾರ್‍ಕೋಡ್​ ನಮೂದಿಸಿ ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬ್ಲಿಷ್ಮೆಂಟ್ ಅಸೋಸಿಯೇಶನ್‍ಗೆ ರವಾನಿಸುವಂತೆ ತಿಳಿಸಿದ ಅವರು, ಈ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕರ ಮೂಲಕ ಸೂಚನಾ ಪತ್ರ ಕಳುಹಿಸಿಕೊಡುವಂತೆ ಸಲಹೆ ನೀಡಿದರು. ಅವಶ್ಯಕ ಪ್ಲಾಸ್ಟಿಕ್ ಹೊರತುಪಡಿಸಿ ಇನ್ನಿತರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿಗಳಲ್ಲಿ ಸ್ವಚ್ಛತಾ ಕಾರ್ಯ ತೀವ್ರಗೊಳಿಸುವ ಜೊತೆಗೆ ಪ್ಲಾಸ್ಟಿಕ್ ದುರ್ಬಳಕೆಯಾಗದಂತೆ ಅಧಿಕಾರಿಗಳೇ ಮುತುವರ್ಜಿ ವಹಿಸುವಂತೆ ಸೂಚಿಸಿದರು.

ಇನ್ನು ಜಿಲ್ಲೆಯು ಐತಿಹಾಸಿಕ ಹಾಗೂ ವಿಶ್ವ ಪ್ರಸಿದ್ದ ಸ್ಮಾರಕಗಳನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸಲು ವಿಶೇಷ ಗಮನ ನೀಡಲಾಗುತ್ತಿದ್ದು, ಸ್ಮಾರಕಗಳ ರಸ್ತೆ ಬದಿ ಮತ್ತು ಸ್ಮಾರಕಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಲು ವಿಶೇಷವಾಗಿ ನಗರದ ಸ್ಮಾರಕಗಳ ವ್ಯಾಪ್ತಿಯಲ್ಲಿಯೂ ಸ್ವಚ್ಚ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳೇ ಉಸ್ತುವಾರಿ ವಹಿಸಿಕೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ವಿಜಯಪುರ Body:ವಿಜಯಪುರ: ಮನೆ-ಮನೆಯಿಂದ ಕಸ ಸಂಗ್ರಹಣೆ, ತ್ಯಾಜ್ಯಗಳ ವಿಂಗಡಣೆ ಹಾಗೂ ಸಂಸ್ಕರಣಾ ಚಟುವಟಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
         ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ತಪ್ಪದೇ ಮನೆ-ಮನೆಯಿಂದ ಕಸ ಸಂಗ್ರಹಣೆ, ಘನತ್ಯಾಜ್ಯಗಳ ವಿಂಗಡಣೆ ಹಾಗೂ ಸಂಸ್ಕರಣಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಜೊತೆಗೆ ಪ್ಲಾಸ್ಟಿಕ್ ಮುಕ್ತ ಜಿಲ್ಲೆ ಹಾಗೂ ನಗರಗಳನ್ನಾಗಿ ರೂಪಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
         ಅದರಂತೆ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಬಾರ್‍ಕೋಡ ನಮೂದಿಸಿ ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬ್ಲಿಷಮೆಂಟ್ ಅಸೋಸಿಯೇಶನ್‍ಗೆ ರವಾನಿಸುವಂತೆ ತಿಳಿಸಿದ ಅವರು, ಈ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕರ ಮೂಲಕ ಸೂಚನಾ ಪತ್ರ ಕಳುಹಿಸಿಕೊಡುವಂತೆ ಸಲಹೆ ನೀಡಿದರು.
         ಅವಶ್ಯಕ ಪ್ಲಾಸ್ಟಿಕ್ ಹೊರತುಪಡಿಸಿ ಇನ್ನಿತರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿಗಳಲ್ಲಿ ಸ್ವಚ್ಛತಾ ಕಾರ್ಯ ತೀವ್ರಗೊಳಿಸುವ ಜೊತೆಗೆ ಪ್ಲಾಸ್ಟಿಕ್ ದುರ್ಬಳಕೆಯಾಗದಂತೆ ಅಧಿಕಾರಿಗಳೇ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
         ಜಿಲ್ಲೆಯ ನಗರ ಸ್ಥಳೀಯ ವ್ಯಾಪ್ತಿಯಲ್ಲಿ ಹಾಗೂ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿಯೊಂದು ವಾರ್ಡನಲ್ಲಿ ಶೇಕಡಾ ನೂರರಷ್ಟು ಮನೆ-ಮನೆ ಕಸ ಸಂಗ್ರಹಣೆ ಕಾರ್ಯ ಕೈಗೊಳ್ಳಬೇಕು. ಈಗಾಗಲೇ ಕ್ರೀಯಾಯೋಜನೆಗಳಿಗೆ ಅನುಮೋದನೆ ನೀಡಿರುವ ಹಿನ್ನಲೆಯಲ್ಲಿ ಮನೆ-ಮನೆಯಿಂದ ಕಸ ಸಂಗ್ರಹಣೆ ಕಾರ್ಯ ಚುರುಕುಗೊಳಿಸುವ ಜೊತೆಗೆ ಒಣ ಹಾಗೂ ಹಸಿ ಕಸ ವಿಂಗಡಿಸಿ ಪಡೆಯುವಂತೆ ಸಲಹೆ ನೀಡಿ, ಸಾರ್ವಜನಿಕರೂ ಕೂಡ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
         ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ಜಾಗೃತಿ ಕಾರ್ಯಕ್ರಮಗಳನ್ನು ಯೋಜನಾಬದ್ಧವಾಗಿ ಹಮ್ಮಿಕೊಳ್ಳುವಂತೆ ತಿಳಿಸಿದ ಅವರು, ಅವಕಾಶವಿದ್ದಲ್ಲಿ ಖಾಸಗಿ ಅಥವಾ ಸ್ವಸಹಾಯ ಸಂಘಗಳ ಸಹಕಾರ ಸಹ ಪಡೆದು, ಪರಿಸರ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು. ಹೆಚ್ಚು ಕಸ ಸಂಗ್ರಹಣಾ ಸ್ಥಳಗಳನ್ನು ಯೋಜನಾಬದ್ಧವಾಗಿ ಗುರುತಿಸಿಕೊಂಡು ಕಸ ಸಂಗ್ರಹಿಸುವುದರ ಜೊತೆಗೆ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ವಿವಿಧ ತಾಲೂಕಾವಾರು ಕಸ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಅವಶ್ಯಕವಿರುವ ಜಮೀನಿನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
         ಜಿಲ್ಲೆಯು ಐತಿಹಾಸಿಕ ಹಾಗೂ ವಿಶ್ವ ಪ್ರಸಿದ್ದ ಸ್ಮಾರಕಗಳನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸಲು ವಿಶೇಷ ಗಮನ ನೀಡಲಾಗುತ್ತಿದ್ದು, ಸ್ಮಾರಕಗಳ ರಸ್ತೆ ಬದಿ ಮತ್ತು ಸ್ಮಾರಕಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಲು ವಿಶೇಷವಾಗಿ ನಗರದ ಸ್ಮಾರಕಗಳ ವ್ಯಾಪ್ತಿಯಲ್ಲಿಯೂ ಸ್ವಚ್ಚ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳೇ ಉಸ್ತುವಾರಿ ವಹಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
         ಘನತ್ಯಾಜ್ಯ ನಿರ್ವಹಣೆ ಮತ್ತು ಸಂಸ್ಕರಣೆಗೆ ತಜ್ಞ ಏಜೆನ್ಸಿಗಳ ಅವಶ್ಯಕತೆ ಇರುವ ಹಿನ್ನಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ನಿಯಮಾವಳಿಗಳನ್ವಯ ಘನತ್ಯಾಜ್ಯ ನಿರ್ವಹಣೆ ಮತ್ತು ಸಂಗ್ರಹಣೆಗೆ ಗಮನ ನೀಡಬೇಕು. ಘನತ್ಯಾಜ್ಯ ನಿರ್ವಹಣೆಗಾಗಿ ಸಿಂದಗಿ ಸೇರಿದಂತೆ ವಿವಿಧ ಕಡೆಗಳಲ್ಲಿ ನೀಡಲಾಗಿರುವ ಸೆಡ್ಡಿಂಗ್ ಮಶಿನ್, ಸೆಗ್ರಿಗೇಶನ್ ಮಶಿನ್ ಸೇರಿದಂತೆ ಅವಶ್ಯಕ ಸಲಕರಣೆಗಳು ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರೂ ಸಹ ಕಸ ಎಲ್ಲೆಂದರಲ್ಲಿ ಚೆಲ್ಲದೇ ಮನೆಗೆ ಭೇಟಿ ನೀಡುವ ಕಸ ಸಂಗ್ರಹಣಾ ವಾಹನಗಳಿಗೆ ಕಸ ನೀಡುವವಂತೆ ಅವರು ಸಭೆಯಲ್ಲಿ ಮನವಿ ಮಾಡಿದರು.
         ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.