ವಿಜಯಪುರ: 800 ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನ ಭರ್ತಿ ಮಾಡಲು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲು ಪೂರ್ವ ತಯಾರಿ ನಡೆಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಸಭಾಭವನದಲ್ಲಿ ನಡೆದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಎಸ್ಸಿಪಿ, ಟಿಎಸ್ಪಿ ಅನುದಾನದ ಅಡಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಫೆಬ್ರವರಿ 27ರಂದು ನಿಗಡಿಪಡಿಸಲು ನಿರ್ಧರಿಸಬೇಕು. ಮೇಳದಲ್ಲಿ ಎನ್‌ಎಬಿಎಚ್ ಮಾನ್ಯತೆ ಪಡೆದ ಆಸ್ಪತ್ರೆಗಳು ಭಾಗವಸಲಿವೆ. ಇದೇ ತಿಂಗಳಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಮೇಳ ಹಮ್ಮಿಕೊಳ್ಳಲಾಗಿದೆ. ಅಧಿಕೃತ ದಿನಾಂಕ ನಿಗದಿಗಾಗಿ ಚಿಂತನೆ ನಡೆದಿದೆ. ಮೇಳದಲ್ಲಿ ಯಾವುದೇ ಲೋಪದೋಷಗಳಾದಂತೆ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯಧಿಕಾರಿ ಡಾ. ಮಹೇಂದ್ರ ಕಾಪಸೆ, ಈ ಮೇಳದಲ್ಲಿ ಪರಿಶಿಷ್ಟ ಜಾತಿ 140, ಪರಿಶಿಷ್ಟ ಪಂಗಡದ 70 ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಮಟ್ಟದ ಮೇಳದಲ್ಲಿ ಅಪೋಲೋ, ಎಂ.ಎಸ್ ರಾಮಯ್ಯ, ನಾರಾಯಣ ಹೃದಯಾಲಯ ಆಸ್ಪತ್ರೆಗಳು ಭಾಗವಹಿಸಲಿವೆ. ವಿವಿಧ ಜಿಲ್ಲೆಗಳ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ 200 ಅಭ್ಯರ್ಥಿಗಳ ಆಯ್ಕೆ ಮಾಡಿ 3ರಿಂದ 9 ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ. ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಿಳಿಸಿದರು.