ವಿಜಯಪುರ: ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳಗ್ಗೆ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದು, ಅಕ್ರಮವಾಗಿಟ್ಟುಕೊಂಡಿದ್ದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ದರ್ಗಾ ಜೈಲಿನಲ್ಲಿ ಕೈದಿಗಳು ಕಾನೂನು ಬಾಹಿರವಾಗಿ 3 ಮೊಬೈಲ್, ಚಾರ್ಜರ್, ಇಯರ್ ಫೋನ್, ತಂಬಾಕು, ಬೀಡಿ ಕಟ್ಟುಗಳನ್ನು ಇಟ್ಟುಕೊಂಡಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ವಿಜಯಪುರ ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮವಾಗಿಟ್ಟುಕೊಂಡಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು, ಜೈಲಿನಲ್ಲಿ ಅಕ್ರಮವಾಗಿ ಬಳಕೆಯಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನಧಿಕೃತವಾಗಿ ಈ ಮೊಬೈಲ್, ಸಿಮ್ಗಳನ್ನು ಯಾರು ಬಳಕೆ ಮಾಡುತ್ತಿದ್ದರು ಎನ್ನುವುದನ್ನರಿಯಲು ತನಿಖೆ ನಡೆಸಲಾಗುವುದು ಎಂದು ಎಸ್ಪಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.