ವಿಜಯಪುರ: ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ವೈದ್ಯನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಂಜಾರ ಕ್ರಾಸ್ ಬಳಿ ನಡೆದಿದೆ. ಡಾ.ಆರ್.ಎನ್.ಬಿರಾದಾರ್ ಪ್ಯಾರಾಮೆಡಿಕಲ್ ಕಾಲೇಜಿನ ಅಧ್ಯಕ್ಷ ಡಾ.ರಮೇಶಗೌಡ ಬಿರಾದಾರ್ ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯರಾಗಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ. ಪತ್ನಿಯೊಂದಿಗೆ ಜಗಳ ಮಾಡಿ ತವರಿಗೆ ಕಳುಹಿಸಿದ್ದು, ಕಳೆದ ಒಂದು ವಾರದಿಂದ ಪತ್ನಿ ತವರಿನಲ್ಲಿದ್ದರು. ಮನೆಯಲ್ಲಿ ಒಂಟಿಯಾಗಿದ್ದ ರಮೇಶಗೌಡ ಬಿರಾದಾರ್ ಮಾನಸಿಕ ಖಿನ್ನತೆಗೆ ಒಳಗಾಗಿರೋ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಮೇಶಗೌಡ ಪ್ಯಾರಾ ಮೆಡಿಕಲ್ ಕಾಲೇಜಿನ ಮೊದಲ ಮಹಡಿಯಲ್ಲಿ ವಾಸವಿದ್ದರು. ಬೆಂಕಿ ಹಚ್ಚಿಕೊಂಡಿದ್ದ ಕಾರಣ ಕಟ್ಟಡಕ್ಕೆ ಕೂಡಾ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದರು. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ತುಮಕೂರು: ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ಹೋಟೆಲ್ ಮಾಲೀಕನಿಂದ ಹಲ್ಲೆ..