ETV Bharat / state

ಡಿಸಿ ವೈ.ಎಸ್.ಪಾಟೀಲರ ವರ್ಗಾವಣೆ ಆದೇಶ ಹಿಂಪಡೆಯುವಂತೆ ವೈದ್ಯರಿಂದ ಮನವಿ - Vijayapura latest news

ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶವನ್ನು ಹಿಂಪಯಬೇಕೆಂದು ಭಾರತೀಯ ವೈದ್ಯಕೀಯ ಸಂಘಟನೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Vijayapura
Vijayapura
author img

By

Published : Jul 29, 2020, 3:54 PM IST

ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರ ವರ್ಗಾವಣೆ ಆದೇಶ ಹಿಂಪಡೆಯುವಂತೆ ಭಾರತೀಯ ವೈದ್ಯಕೀಯ ಸಂಘಟನೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರನ್ನ ಸರ್ಕಾರ ದಿಢೀರ್ ವರ್ಗಾವಣೆ ಮಾಡಿರೋದು ಸರಿಯಲ್ಲ. ಕೊರೊನಾ ನಿಯಂತ್ರಣಕ್ಕೆ ಪ್ರತಿ ಹಂತದಲ್ಲಿ ವೈದ್ಯರಿಗೆ ಮಾರ್ಗದರ್ಶನ ನೀಡಿ ಪ್ರತಿ ಹಳ್ಳಿಗಳಿಗೂ ಹೋಗಿ ಜನರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಿ ಸೋಂಕನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಜಿಲ್ಲೆಯ ನಾಡಿ ಮಿಡಿತ ಅರಿತ ಸರಳ ಅಧಿಕಾರಿಯನ್ನು ವರ್ಗಾವಣೆ ಮಾಡಿರೋದು ಜಿಲ್ಲೆಯ ಜನರ ಕಳವಳಕ್ಕೆ ಕಾರಣವಾಗಿದೆ.‌ ಬಡವರ ಕಷ್ಟಗಳಿಗೆ ಸದಾ ಸ್ಪಂದಿಸುವ ಅಧಿಕಾರಿ ಜಿಲ್ಲೆಗೆ ಅವಶ್ಯವಾಗಿದೆ. ವರ್ಗಾವಣೆ ಮಾಡಿರುವುದು ಕೊರೊನಾ ನಿಯಂತ್ರಣ ಹಳಿ ತಪ್ಪಿದಂತಾಗುತ್ತದೆ ಎಂದು ವೈದ್ಯರು ಅಪರ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.

ಸರ್ಕಾರ ತಕ್ಷಣವೇ ದಕ್ಷ ಅಧಿಕಾರಿಯ ವರ್ಗಾವಣೆ ಆದೇಶ ಹಿಂಪಡೆದು ಜಿಲ್ಲೆಯಲ್ಲಿ ಮುಂದುವರೆಸುವಂತೆ ಕೋರಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.