ETV Bharat / state

ವಿಜಯಪುರ: ಪತ್ನಿ, ಅತ್ತೆ ಕೊಂದು ಪೊಲೀಸರಿಗೆ ಶರಣಾದ ಆರೋಪಿ - vijaypura crime news

ಮನೆಯಲ್ಲಿ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ.

ಪತ್ನಿ ಅತ್ತೆ ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

author img

By ETV Bharat Karnataka Team

Published : Sep 18, 2023, 11:18 AM IST

Updated : Sep 18, 2023, 12:55 PM IST

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ. ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ.

ವಿವರ: ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು.‌ ಕಳೆದ ಆರು ತಿಂಗಳಿಂದ ನವಭಾಗ್ ಪ್ರದೇಶದಲ್ಲಿ ಈ ಕುಟುಂಬ ನೆಲೆಸಿತ್ತು. ಪತ್ನಿ ತನ್ನ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಮನೆ ಕೆಲಸ ಮಾಡುತ್ತಿಲ್ಲ. ಮಹಿಳಾ ಹಾಗೂ ವಿವಿಧ ಸಂಘಟನೆ‌ಗಳ ಕೆಲಸದ ಕಾರಣ ಸದಾ ಮನೆಯಾಚೆ ಇರುತ್ತಾಳೆ ಎಂದು ಕೋಪಗೊಂಡಿದ್ದಾನೆ. ಇದರಿಂದ ರೋಸಿ ಹೋಗಿದ್ದ ಆರೋಪಿ ಇಂದು‌ ಬೆಳಗಿನ ಜಾವ ಮಲಗಿದ್ದ ಪತ್ನಿ ಹಾಗು ಅತ್ತೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಂಬು ಗರ್ಭಿಣಿಯ ಕೊಲೆ (ಪ್ರತ್ಯೇಕ ಪ್ರಕರಣ): ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಪತಿಯೇ ಹತ್ಯೆ ಮಾಡಿದ್ದ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ (ಸೆ.15) ನಡೆದಿತ್ತು. ಘಟನೆಯಲ್ಲಿ ಶೋಭಾ ಎನ್ನುವರು ಸಾವನ್ನಪ್ಪಿದ್ದಾರೆ. ಮಂಜು ಅಲಿಯಾಸ್ ಮಂಜುನಾಥ್ ಕೊಲೆ ಆರೋಪಿ.

ವಿವರ: ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಆಗಾಗ್ಗೆ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ದಂಪತಿಗೆ 5 ವರ್ಷದ ಗಂಡು ಮಗು ಇದೆ. 8 ತಿಂಗಳ ಗರ್ಭಿಣಿಯಾಗಿದ್ದ ಶೋಭಾ ಎರಡನೇ ಮಗುವಿನ ಆಗಮನಕ್ಕೆ ಕಾಯುತ್ತಿದ್ದರು. ತವರು ಮನೆಗೆ ಹೋದ ಪತ್ನಿ ಬರುತ್ತಿಲ್ಲವೆಂದು ಖ್ಯಾತೆ ತೆಗೆದ ಗಂಡ ಕುಡಿದ ಮತ್ತಿನಲ್ಲಿ ಬ್ಲೇಡ್​ನಿಂದ ಕುತ್ತಿಗೆ ಕುಯ್ದು ಹತ್ಯೆ ಮಾಡಿದ್ದಾನೆ. ಮಾರಣಾಂತಿಕವಾಗಿ ಗಾಯಗೊಂಡಿದ್ದ ಗರ್ಭಿಣಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಗಂಡನೇ ತನ್ನ ಪತ್ನಿ ಮತ್ತು ಮಗನನ್ನು ಹತ್ಯೆ ಮಾಡಿದ್ದ. ಈ ಬಗ್ಗೆ ಬಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಮನೆ ಕೊಠಡಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

Last Updated : Sep 18, 2023, 12:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.