ETV Bharat / state

ಹಥ್ರಾಸ್ ಅತ್ಯಾಚಾರ ಪ್ರಕರಣ ; ಕಾಮುಕರಿಗೆ ಗಲ್ಲುಶಿಕ್ಷೆ ನೀಡುವಂತೆ ಡಿಎಸ್​ಎಸ್​ ಪ್ರತಿಭಟನೆ

ಕಾಮುಕರ ಅಟ್ಟಹಾಸಕ್ಕೊಳಗಾದ ಯುವತಿಯ ಶವವನ್ನು ಪೋಷಕರಿಗೆ ನೀಡದೆ ಅಲ್ಲಿನ ಸರ್ಕಾರ ಶವ ಸಂಸ್ಕಾರ ಮಾಡಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ‌. ಪ್ರಕರಣ ಮುಚ್ಚಿ ಹಾಕುವ ಕುತಂತ್ರ ನಡೆಯುತ್ತಿದೆ..

author img

By

Published : Oct 3, 2020, 3:15 PM IST

DSS protest
DSS protest

ವಿಜಯಪುರ : ಹಥ್ರಾಸ್​ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕರಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ಡಿಎಸ್‌ಎಸ್ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ ಡಿಎಸ್ಎಸ್ ಕಾರ್ಯಕರ್ತರು

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿದ ಪ್ರತಿಭಟನಾಕಾರು, ಯುವತಿ ಮೇಲೆ 4 ಜನ ಕಾಮುಕರು ಅತ್ಯಾಚಾರ ನಡೆಸಿ ಚಿತ್ರಹಿಂಸೆ ನೀಡಿದ್ದಾರೆ. ಘಟನೆಗೆ ದೇಶಾ‌ದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಉತ್ತರಪ್ರದೇಶ ಸರ್ಕಾರ ಅತ್ಯಾಚಾರಕ್ಕೆ‌ ಕಾರಣವಾದ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.‌ ಕೃತ್ಯದಲ್ಲಿ ಪ್ರಭಾವಿ ರಾಜಕಾರಣಿಗಳ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾಮುಕರ ಅಟ್ಟಹಾಸಕ್ಕೊಳಗಾದ ಯುವತಿಯ ಶವವನ್ನು ಪೋಷಕರಿಗೆ ನೀಡದೆ ಅಲ್ಲಿನ ಸರ್ಕಾರ ಶವ ಸಂಸ್ಕಾರ ಮಾಡಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ‌. ಪ್ರಕರಣ ಮುಚ್ಚಿ ಹಾಕುವ ಕುತಂತ್ರ ನಡೆಯುತ್ತಿದೆ. ಸರ್ಕಾರ ಕಾಮುಕರ ಹೆಡೆಮುರಿ ಕಟ್ಟಲು ಕಠಿಣ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ರು.

ಅತ್ಯಾಚಾರಕ್ಕೊಳಗಾದ ಯುವತಿಯ ಕುಟುಂಬಕ್ಕೆ ಪರಿಹಾರ ನೀಡುಬೇಕು‌. ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.