ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ರಾತ್ರಿ 9.23ರ ಸಮಯದಲ್ಲಿ ವಿಜಯಪುರದಲ್ಲಿ ಭೂಕಂಪನ ಸಂಭವಿಸಿದೆ.
ನಗರದ ರೈಲ್ವೆ ನಿಲ್ದಾಣ ಏರಿಯಾ, ಗೋಳಗುಮ್ಮಟ ಏರಿಯಾ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಅದುರಿದೆ. ಕಂಪನದಿಂದ ಜಿಲ್ಲೆಯ ಜನತೆಯಲ್ಲಿ ಮತ್ತೆ ಭೀತಿ ಆವರಿಸಿದೆ.
ಕೆಲ ತಿಂಗಳುಗಳಿಂದ ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಆಗಾಗ್ಗೆ ಭೂಕಂಪನ ನಡೆಯುತ್ತಲೇ ಇರುವುದರಿಂದ ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.
ಇದನ್ನೂ ಓದಿ: ಉತ್ತರಪ್ರದೇಶ ಬಳಿಕ ರಾಜಸ್ಥಾನದಲ್ಲಿ 4.1 ತೀವ್ರತೆಯ ಭೂಕಂಪನ