ವಿಜಯಪುರ: ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧ್ಯಕ್ಷರಾಗಿ ಸುರೇಶಗೌಡ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿ ಕಲ್ಲಪ್ಪ ಇಂಡಿ ಆಯ್ಕೆಯಾಗಿದ್ದಾರೆ.
ಇಂದು ನಡೆದ ಎಪಿಎಂಸಿ ಚುನಾವಣೆಯಲ್ಲಿ ತಿಕೋಟಾ ಮತಕ್ಷೇತ್ರದ ಸುರೇಶಗೌಡ ಬಿರಾದಾರ ಹಾಗೂ ಶಿವಣಗಿ ಮತಕ್ಷೇತ್ರದ ಕಲ್ಲಪ್ಪ ಶಿವಪ್ಪ ಇಂಡಿ ಕ್ರಮವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ವಿಜಯಪುರ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.