ವಿಜಯಪುರ: ಸಿದ್ಧೇಶ್ವರ ಸಹಕಾರಿ ಬ್ಯಾಂಕ್ಗೆ ನಾಳೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿ ಒಟ್ಟು 37 ಅಭ್ಯರ್ಥಿಗಳು ಉಳಿದಿದ್ದಾರೆ.
ಬ್ಯಾಂಕ್‌ನ 19 ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡಬೇಕೆಂಬ ಒಂದು ಗುಂಪಿನ ಪರಿಶ್ರಮ ವ್ಯರ್ಥವಾಗಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನದವರೆಗೆ ಸಾಕಷ್ಟು ಮನವೊಲಿಕೆ ನಡುವೆಯೂ 53 ಜನ ನಾಮಪತ್ರ ಸಲ್ಲಿಸಿದ್ದರು. ಆ ಪೈಕಿ 15 ಜನ ಕಣದಿಂದ ಹಿಂದೆ ಸರಿದಿದ್ದು 37 ಜನ ಕಣದಲ್ಲಿ ಉಳಿದು ಕೊಂಡಿದ್ದಾರೆ.
ಇದರಲ್ಲಿ ಸಾಮಾನ್ಯ ಕ್ಷೇತ್ರಕ್ಕೆ 8 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 22 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಹಿಳಾ ಮೀಸಲು ಕ್ಷೇತ್ರದಿಂದ ಮೂವರು ನಾಮಪತ್ರ ಸಲ್ಲಿಸಿದ್ದಾರೆ. ಹಿಂದುಳಿದ ಪ್ರವರ್ಗ ‘ಅ’ ಯಿಂದ 1 ಸ್ಥಾನಕ್ಕೆ ಇಬ್ಬರು ಕಣದಲ್ಲಿದ್ದಾರೆ. ಹಿಂದುಳಿದ ಪ್ರವರ್ಗ ‘ಬ’ ಕ್ಕೆ 2 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1 ಸ್ಥಾನಕ್ಕೆ ಆಯ್ಕೆ ಮಾಡಬೇಕಿದೆ.
ಪರಿಶಿಷ್ಟ ಪಂಗಡಕ್ಕೆ 2 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1 ಸ್ಥಾನಕ್ಕೆ ಚುನಾವಣೆ ನಡೆಸಬೇಕಿದೆ. ಪರಿಶಿಷ್ಟ ಜಾತಿಯ 6 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, 1 ಸ್ಥಾನಕ್ಕೆ ಚುನಾವಣೆ ನಡೆಯಲಿದೆ
ನಾಳೆ ಎಸ್‌ಎಸ್ ಹೈಸ್ಕೂಲ್‌ನಲ್ಲಿ ಚುನಾವಣೆ ನಡೆಯಲಿದೆ. ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತದಾನ ಶಾಂತಿಯುತವಾಗಿ ನಡೆಯಲು ಹಾಗೂ ಸದಸ್ಯರುಗಳು ಮತದಾನಕ್ಕೆ ಆಗಮಿಸುವಾಗ ಗುರುತಿನ ಕಾರ್ಡ್ ಮಾತ್ರ ಪರಿಗಣಿಸಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.