ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವೂ ಬೆಲೆ ಏರಿಕೆಯಿಂದ ಕಂಗೆಟ್ಟಿದೆ. ಈ ಬಾರಿ 5 ಲಕ್ಷ ರೂಪಾಯಿಗೂ ಅಧಿಕ ಬಿಲ್ ಬಂದಿದ್ದು, ಬಿಲ್ ಕಂಡು ಸ್ವತಃ ಕುಲಪತಿಗಳೇ ಶಾಕ್ ಆಗಿದ್ದಾರೆ.
ದೊಡ್ಡ ಕ್ಯಾಂಪಸ್ ಹೊಂದಿರುವ ಮಹಿಳಾ ವಿಶ್ವವಿದ್ಯಾಲಯದ ಏಪ್ರಿಲ್ ತಿಂಗಳ ವಿದ್ಯುತ್ ಬಿಲ್ 3,39,313 ರೂ. ಬಂದಿತ್ತು. ಮೇ ತಿಂಗಳ ಬಿಲ್ 5,06,302 ಲಕ್ಷ ರೂ. ಬಂದಿದೆ. ವಿವಿಯಲ್ಲಿ ಸೋಲಾರ್ ಸೌಲಭ್ಯವಿದ್ದರೂ ವಿದ್ಯುತ್ ಬಿಲ್ ಮಿತಿಮೀರಿ ಬಂದಿರುವುದು ವಿವಿ ಆಡಳಿತ ಮಂಡಳಿಯ ಅಚ್ಚರಿಗೆ ಕಾರಣವಾಗಿದೆ.
ಜೂನ್ ತಿಂಗಳ ಬಿಲ್ ವೀಕ್ಷಿಸಿದರೆ ಈ ತಿಂಗಳ ಬಿಲ್ನಲ್ಲಿ ಏರಿಕೆ ಕಂಡುಬಂದಿದೆ. ಮೊದಲು ಒಂದು ಕೆವಿ ವ್ಯಾಟ್‌ಗೆ ನಿಗದಿತ ಶುಲ್ಕ 260 ರೂ. ಇದ್ದು, ಈಗ ಅದನ್ನು 300 ರೂ.ಗೆ ಏರಿಸಲಾಗಿದೆ. ನಿಗದಿತ ಸ್ಲಾೃಬ್ ಮೌಲ್ಯವೂ ಯೂನಿಟ್‌ಗೆ 7.50 ರೂ. ಗೆ ಏರಿದೆ. ಜೊತೆಗೆ ಎಫ್‌ಎಸಿ ದರವನ್ನೂ ಯೂನಿಟ್‌ಗೆ 2.55 ರೂ. ಗೆ ಏರಿಸಲಾಗಿದೆ. ಇದೆಲ್ಲದರ ಪರಿಣಾಮ 5,06,302 ಲಕ್ಷ ರೂ. ಬಂದಿದೆ.
ವಿಜಯಪುರ ಮಹಿಳಾ ವಿಶ್ವವಿದ್ಯಾಲಯದ ರಿಜಿಸ್ಟರ್ ಬಿ.ಎಸ್. ನಾವಿ ಈ ಬಗ್ಗೆ ಮಾಹಿತಿ ನೀಡಿದ್ದು, ಮಹಿಳಾ ವಿಶ್ವವಿದ್ಯಾಲಯ ದೊಡ್ಡ ಕ್ಯಾಂಪಸ್ ಹೊಂದಿದೆ. ಹೆಸ್ಕಾಂನಿಂದ ವಿದ್ಯುತ್ ಪಡೆಯುವುದರ ಜೊತೆ ಸೋಲಾರ್ ಮೂಲಕವೂ ನೈಸರ್ಗಿಕವಾಗಿ ವಿದ್ಯುತ್ ಪಡೆದು ಬಳಸಿಕೊಳ್ಳಲಾಗುತ್ತಿದೆ. ಪ್ರತಿ ತಿಂಗಳು 2-3 ಲಕ್ಷ ರೂ. ವಿದ್ಯುತ್ ಬಿಲ್ ಬರುತ್ತಿತ್ತು. ಆದರೆ ಈ ಬಾರಿ 5,63,302 ರೂ. ಬಿಲ್ ಬಂದಿದೆ. ಸೋಲಾರ್ ಕಂಪನಿ ಮತ್ತು ಹೆಸ್ಕಾಂ ನಡುವೆ ಯಾವ ರೀತಿಯ ಒಪ್ಪಂದ ಆಗಿದೆ ಎನ್ನುವುದರ ಬಗ್ಗೆ ನಮ್ಮ ವಕೀಲರ ಬಳಿ ಕಾನೂನು ಸಲಹೆ ಪಡೆದುಕೊಂಡು ಮುಂದೆ ವಿದ್ಯುತ್ ಬಿಲ್ ತುಂಬುವ ಬಗ್ಗೆ ವಿಚಾರ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: Electricity price hike: ವಾಣಿಜ್ಯೋದ್ಯಮಿಗಳಿಂದ ಇಂದು ಸಾಂಕೇತಿಕ ಬಂದ್
ವಿದ್ಯುತ್ ದರ ಏರಿಕೆಗೆ ಹಲವೆಡೆ ಅಸಮಾಧಾನ ವ್ಯಕ್ತವಾಗಿದೆ. ವಾಣಿಜ್ಯೋದ್ಯಮಿಗಳು ಇಂದು ಸಾಂಕೇತಿಕ ಪ್ರತಿಭಟನೆ ಕೈಗೊಂಡಿದ್ದಾರೆ. ಹುಬ್ಬಳ್ಳಿಯ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸಂಸ್ಥೆ ಈ ಬಂದ್ಗೆ ಕರೆ ನೀಡಿದ್ದು, ವಿವಿಧ ವ್ಯಾಪಾರ ವಹಿವಾಟು ಸ್ಥಗಿತ ಆಗಿದೆ. ವಿದ್ಯುತ್ ಏರಿಕೆ ದರವನ್ನು ಹಿಂಪಡೆಯುವಂತೆ ಹಲವೆಡೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.
ಇದನ್ನೂ ಓದಿ: ಬರೋಬ್ಬರಿ 1,03,315 ರೂ ಬಿಲ್ ನೀಡಿದ ಜೆಸ್ಕಾಂ.. ಕೊಪ್ಪಳದಲ್ಲಿ ವಿದ್ಯುತ್ ಬಿಲ್ ನೋಡಿ ಶಾಕ್ ಆದ ವೃದ್ದೆ!
ಮತ್ತೊಂದು ಘಟನೆಯಲ್ಲಿ ತಗಡಿನ ಶೆಡ್ನಲ್ಲಿ ವಾಸಿಸುವ ವೃದ್ಧೆಗೆ ಲಕ್ಷ ಲಕ್ಷ ವಿದ್ಯುತ್ ಬಿಲ್ ಬಂದಿದೆ. ಕೊಪ್ಪಳದ ಭಾಗ್ಯನಗರ ನಿವಾಸಿ ಗಿರಿಜಮ್ಮ ಎಂಬುವವರು ಪ್ರತಿದಿನ ಎರಡೇ ಲೈಟ್ ಅನ್ನು ಬಳಸುವುದು. ಆದರೂ, ಅವರಿಗೆ 1,03,315 ರೂ. ಬಿಲ್ ಬಂದಿದೆ.