ವಿಜಯಪುರ : ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ದಿನದ 24 ಗಂಟೆಗಳ ಕಾಲ ಆ್ಯಂಬುಲೆನ್ಸ್ ಸಿಬ್ಬಂದಿ ಹೋರಾಟ ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಭೀತಿ ಆರಂಭವಾದ ದಿನದಿಂದಲೂ ಈ ಕೊರೊನಾ ವಾರಿಯರ್ಸ್ ತಮ್ಮ ಮನೆಗಳನ್ನು ತೊರೆದು ಜನ ಸೇವೆ ಮಾಡುತ್ತಿದ್ದಾರೆ.
ಕೋವಿಡ್-19 ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಮಾಡುವವರು, ಶಿಫ್ಟ್ ಆಧಾರದ ಮೇಲೆ ಕೆಲಸ ಮಾಡಿ ಮನೆಗೆ ಹೋಗ್ತಾರೆ. ಆದರೆ, ಆ್ಯಂಬುಲೆನ್ಸ್ ಡ್ರೈವರ್ ಹಾಗೂ ಸ್ಟಾಫ್ ನರ್ಸ್ಗಳಿಗೆ ರಜೆ ಸಿಗುತ್ತಿಲ್ಲ. ಹೋಟೆಲ್ನಲ್ಲಿ ಉಳಿದುಕೊಂಡು ಮನೆಯವರಿಂದ ದೂರವಿದ್ದು, ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಮನೆಯವರೊಂದಿಗೆ ವಿಡಿಯೋ ಕಾಲ್ ಮೂಲಕವೇ ಮಾತನಾಡುತ್ತಾರೆ.
ಗುತ್ತಿಗೆ ಆಧಾರದ ಮೇಲೆ ಸರ್ಕಾರ ಆ್ಯಂಬುಲೆನ್ಸ್ ಸಿಬ್ಬಂದಿಯನ್ನು ನೇಮಿಸಿದೆ. ಇವರಿಗೆ ಕಾಲಕ್ಕೆ ಸರಿಯಾಗಿ ಸಂಬಳ ಹಾಗೂ ಸೌಲಭ್ಯ ಕೂಡಾ ಸರಿಯಾಗಿ ಸಿಗುತ್ತಿಲ್ಲ. ಕೊರೊನಾ ವಾರಿಯಾರ್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವ ಇವರು ಇದೀಗ ಸರ್ಕಾದ ನೆರವಿನ ನಿರೀಕ್ಷೆಯಲ್ಲಿದ್ದಾರೆ.