ವಿಜಯಪುರ: ಉಪಚುನಾವಣೆ ಬಳಿಕ ಆಪರೇಷನ್ ಕಮಲ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ, ಸದ್ಯ ನಡೆಯಲಿರುವ ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ಬಹುಮತ ಪಡೆಯುತ್ತೇವೆ. ಇನ್ನು ಕಾಂಗ್ರೆಸ್-ಜೆಡಿಎಸ್ ನವರು ತಾವಾಗಿಯೇ ಪಕ್ಷ ತೊರೆದು ಬಿಜೆಪಿಗೆ ಬಂದರೆ ನಾವೇನೂ ಮಾಡಕ್ಕಾಗಲ್ಲ. ಅವರು ತಾವಾಗಿಯೇ ಬಿಜೆಪಿಗೆ ಬಂದ್ರೆ ಸ್ವಾಗತಿಸುತ್ತೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಸಾಕಷ್ಟು ಜನ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮುಳುಗುತ್ತಿರುವ ಹಡಗುಗಳು. ಇಂತಹ ಮುಳುಗುತ್ತಿರುವ ಹಡಗಿನಲ್ಲಿ ಯಾವ ಶಾಸಕರು ಇರಲು ಇಷ್ಟ ಪಡುತ್ತಾರೆ? ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅನೇಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿಗೆ ಬರಬಹುದು ಎಂದು ಲೇವಡಿ ಮಾಡಿದರು.
ಹನಿ ಟ್ರ್ಯಾಪ್:
ಶಾಸಕರ ಹನಿ ಟ್ರ್ಯಾಪ್ ಪ್ರಕರಣ ಕುರಿತು ಮಾತನಾಡಿದ ಈಶ್ವರಪ್ಪ, ಇದರಲ್ಲಿ ಯಾವ ಶಾಸಕರ ಹೆಸರು ಬಹಿರಂಗವಾಗಿಲ್ಲ. ಹನಿಟ್ರ್ಯಾಪ್ ಒಂದು ದಂಧೆಯಾಗಿದ್ದರೆ, ಅದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.