ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಅಣಚಿ ಕ್ರಾಸ್ ಬಳಿ ಅಬಕಾರಿ ಹಾಗೂ ಆರ್‌ಟಿಓ ಅಧಿಕಾರಿಗಳ ನಡುವೆ ನಡೆದಿದ್ದ ಮಾತಿನ ಚಕಮಕಿ ಕುರಿತಂತೆ ಇಬ್ಬರೂ ಅಧಿಕಾರಿಗಳಿಗೆ ಕಾರಣ ಕೇಳಿ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ನೋಟಿಸ್ ಜಾರಿ ಮಾಡಿದ್ದಾರೆ.
ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಸದಾಶಿವ ಕೊರ್ತಿ ಹಾಗೂ ಆರ್‌ಟಿಓ ಇನ್ಸ್‌ಪೆಕ್ಟರ್ ನಾಗರಾಜ ಶೆಳ್ಳಗಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. 5 ದಿನಗಳೊಳಗೆ ಉತ್ತರ ನೀಡುವಂತೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಆದೇಶಿಸಿದ್ದಾರೆ.
ಮೂರ್ನಾಲ್ಕು ದಿನಗಳ ಹಿಂದೆ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಆರ್‌ಟಿಓ ಚೆಕ್‌ಪೋಸ್ಟ್‌ಗೆ ನುಗ್ಗಿ ಸ್ಪಿರಿಟ್ ಲಾರಿ ತಡೆದಿದ್ದರ ಬಗ್ಗೆ ಆರ್ ಟಿ ಓ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಡಿಸಿ ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ.