ETV Bharat / state

ನಕಲಿ ಸಹಿಯುಳ್ಳ ವಿಕಲಚೇತನರ ಗುರುತಿನ ಚೀಟಿ ಪತ್ತೆ: ಕ್ರಮಕ್ಕೆ ಡಿಸಿ ಸೂಚನೆ

ವಿಜಯಪುರ ಜಿಲ್ಲೆಯಾದ್ಯಂತ ಜಿಲ್ಲಾ ಶಸ್ತ್ರಚಿಕಿತ್ಸಕರು, ವಿಶೇಷ ವೈದ್ಯಕೀಯ ತಜ್ಞರು ಹಾಗೂ ವಿಕಲಚೇತನರ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ನಕಲಿ ಸಹಿಯುಳ್ಳ 27 ಗುರುತಿನ ಚೀಟಿಗಳು ಪತ್ತೆಯಾಗಿವೆ. ಈ ಕುರಿತಂತೆ ಸಮಗ್ರ ಪರಿಶೀಲನೆ ನಡೆಸುವ ಜೊತೆಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Fake signature disability ID, ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
author img

By

Published : Dec 21, 2019, 5:41 AM IST

ವಿಜಯಪುರ: ಅಂಗವಿಕಲತೆ ಪ್ರಮಾಣ ಪತ್ರ ಮತ್ತು ವಿಕಲಚೇತನರ 27 ನಕಲಿ ಸಹಿಯುಳ್ಳ ಗುರುತಿನ ಚೀಟಿಗಳು ಪತ್ತೆಯಾಗಿದ್ದು, ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕಲಚೇತನರ ಹಕ್ಕುಗಳ ಅಧಿನಿಯಮ-2016 ಉಪನಿಯಮ (72) ರ ಅಡಿ ರಚಿಸಲಾದ ಜಿಲ್ಲಾಮಟ್ಟದ ಸಮಿತಿ ಸಭೆ ಹಾಗೂ ವಿಕಲಚೇತನರ ಯುಡಿಐಡಿ ವಿತರಣೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಜಿಲ್ಲಾ ಶಸ್ತ್ರಚಿಕಿತ್ಸಕರು, ವಿಶೇಷ ವೈದ್ಯಕೀಯ ತಜ್ಞರು ಹಾಗೂ ವಿಕಲಚೇತನರ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ನಕಲಿ ಸಹಿಯುಳ್ಳ 27 ಗುರುತಿನ ಚೀಟಿಗಳು ಪತ್ತೆಯಾಗಿವೆ. ಈ ಕುರಿತಂತೆ ಸಮಗ್ರ ಪರಿಶೀಲನೆ ನಡೆಸುವ ಜೊತೆಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈಗ ಪತ್ತೆಯಾಗಿರುವ ಗುರುತಿನ ಚೀಟಿಗಳಿಗೆ ಸಂಬಂಧಪಟ್ಟಂತೆ ಆಯಾ ತಜ್ಞ ವೈದ್ಯರು ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪೊಲೀಸ್​ ಇಲಾಖೆಗೆ ದೂರು ಸಲ್ಲಿಸಬೇಕು. ಅದರಂತೆ ಮುಂದಿನ ದಿನಗಳಲ್ಲಿ ಈ ರೀತಿಯ ಆಡಳಿತ ವೈದ್ಯಾಧಿಕಾರಿಗಳ ಮತ್ತು ಅಂಗವಿಕಲ ಕಲ್ಯಾಣ ಅಧಿಕಾರಿಗಳ, ತಜ್ಞ ವೈದ್ಯರ ನಕಲಿ ಸಹಿ ಒಳಗೊಂಡ ದಾಖಲೆ ಪತ್ತೆಯಾದಲ್ಲಿ ಆಯಾ ತಜ್ಞ ವೈದ್ಯರನ್ನೇ ಹಾಗೂ ದುರ್ಬಳಕೆ ಮಾಡಿಕೊಂಡಿರುವ ಫಲಾನುಭವಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲೆಗೂ ಕ್ರಮ ಕೈಗೊಳ್ಳಲಾಗುವುದು. ವಿಕಲಚೇತನರ ಕಲ್ಯಾಣಧಿಕಾರಿಗಳು ಸಹ ನೇರ ಹೊಣೆಗಾರರಾಗಲಿದ್ದು ಪಾರದರ್ಶಕ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಯುಡಿಐಡಿ ಕಾರ್ಡ್​ (ಯುನಿಕ್ ಡಿಸೆಬ್ಲೆಟಿಸ್ ಐಡೆಂಡಿಟಿಟಿ ಕಾರ್ಡ್​) ತಾಲೂಕುವಾರು ಆಯಾ ತಾಲೂಕಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ತಜ್ಞ ವೈದ್ಯರು ಅಂಗವಿಕಲತೆಯ ಪ್ರಮಾಣ ಪತ್ರವನ್ನು ಕೂಲಂಕುಶವಾಗಿ ಪರಿಶೀಲಿಸುವಂತೆ ತಿಳಿಸಿದ ಅವರು ಜಿಲ್ಲೆಯಾದ್ಯಂತ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಆಯಾ ತಾಲೂಕಾ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳು ಈ ಗುರುತಿನ ಚೀಟಿ ದೊರಕಿಸುವ ಕಾರ್ಯ ಚುರುಕುಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ರವೀಂದ್ರ ಕಾರಬಾರಿ ಅವರು ಜಿಲ್ಲೆಯಲ್ಲಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಮಾಶಾಸನ ಮತ್ತು ಇತರೆ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು. ಅನರ್ಹರು ಯಾವುದೇ ರೀತಿಯ ಸೌಲಭ್ಯ ಪಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು.

ಸಭೆಯಲ್ಲಿ ವಿಕಲ ಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರ ಅಡಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 17 ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ವಿಜಯಪುರ Body:
ವಿಜಯಪುರ: ಅಂಗವಿಕಲತೆಯ ಪ್ರಮಾಣ ಪತ್ರ ಮತ್ತು ವಿಕಲಚೇತನರ 27 ನಕಲಿ ಸಹಿಯುಳ್ಳ ಗುರುತಿನ ಚೀಟಿಗಳು ಪತ್ತೆಯಾಗಿದ್ದು, ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಉಪನಿಯಮ (72)ರ ಅಡಿ ರಚಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆ ಹಾಗೂ ವಿಕಲಚೇತನರ ಯುಡಿಐಡಿ ವಿತರಣೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತ ಜಿಲ್ಲಾ ಶಸ್ತ್ರಚಿಕಿತ್ಸಕರು, ವಿಶೇಷ ವೈದ್ಯಕೀಯ ತಜ್ಞರು ಹಾಗೂ ವಿಕಲಚೇತನರ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ನಕಲಿ ಸಹಿಯುಳ್ಳ 27 ಗುರುತಿನ ಚೀಟಿಗಳು ಪತ್ತೆಯಾಗಿದ್ದು, ಈ ಕುರಿತಂತೆ ಸಮಗ್ರ ಪರಿಶೀಲನೆ ನಡೆಸುವ ಜೊತೆಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈಗ ಪತ್ತೆಯಾಗಿರುವ ಗುರುತಿನ ಚೀಟಿಗಳಿಗೆ ಸಂಬಂಧಪಟ್ಟಂತೆ ಆಯಾ ತಜ್ಞ ವೈದ್ಯರು ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪೋಲಿಸ್ ಇಲಾಖೆಗೆ ದೂರು ಸಲ್ಲಿಸಬೇಕು. ಅದರಂತೆ ಮುಂದಿನ ದಿನಗಳಲ್ಲಿ ಈ ರೀತಿಯ ಆಡಳಿತ ವೈದ್ಯಾಧಿಕಾರಿಗಳ ಮತ್ತು ಅಂಗವಿಕಲ ಕಲ್ಯಾಣ ಅಧಿಕಾರಿಗಳ, ತಜ್ಞ ವೈದ್ಯರ ನಕಲಿ ಸಹಿ ಒಳಗೊಂಡ ದಾಖಲೆ ಪತ್ತೆಯಾದಲ್ಲಿ ಆಯಾ ತಜ್ಞ ವೈದ್ಯರನ್ನೇ ಹಾಗೂ ದುರ್ಬಳಕೆ ಮಾಡಿಕೊಂಡಿರುವ ಫಲಾನುಭವಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲೆಗೂ ಕ್ರಮ ಕೈಗೊಳ್ಳಲಾಗುವುದು. ವಿಕಲಚೇತನರ ಕಲ್ಯಾಣಧಿಕಾರಿಗಳು ಸಹ ನೇರ ಹೊಣೆಗಾರರಾಗಲಿದ್ದು ಪಾರದರ್ಶಕ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಯುಡಿಐಡಿ ಕಾರ್ಡ( ಯುನಿಕ್ ಡಿಸೆಬ್ಲೆಟಿಸ್ ಐಡೆಂಡಿಟಿಟಿ ಕಾರ್ಡ ) ತಾಲೂಕವಾರು ಆಯಾ ತಾಲೂಕಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ತಜ್ಞ ವೈದ್ಯರು ಅಂಗವಿಕಲತೆಯ ಪ್ರಮಾಣ ಪತ್ರವನ್ನು ಕೂಲಂಕುಶವಾಗಿ ಪರಿಶೀಲಿಸುವಂತೆ ತಿಳಿಸಿದ ಅವರು ಜಿಲ್ಲೆಯಾಧ್ಯಂತ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಆಯಾ ತಾಲೂಕಾ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳು ಈ ಗುರುತಿನ ಚೀಟಿ ದೊರಕಿಸುವ ಕಾರ್ಯ ಚುರುಕುಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ರವೀಂದ್ರ ಕಾರಬಾರಿ ಅವರು ಜಿಲ್ಲೆಯಲ್ಲಿ ಅರ್ಹ ವಿಕಲ ಚೇತನ ಫಲಾನುಭವಿಗಳಿಗೆ ಮಾಶಾಸನ ಮತ್ತು ಇತರೆ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು. ಅನರ್ಹರು ಯಾವುದೇ ರೀತಿಯ ಸೌಲಭ್ಯ ಪಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು.
ಸಭೆಯಲ್ಲಿ ವಿಕಲ ಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರ ಅಡಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 17 ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. ವಿಕಲ ಚೇತನರ ಸಬಲೀಕರಣ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಉಪಾಧ್ಯಾಯ ಅವರು ಸ್ವಾಗತಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.